Hasanamba temple
ಹಾಸನಾಂಬೆ ದೇವಾಲಯ

ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ನಾಳೆ ತೆರೆ: VIP ಸೇರಿ ಎಲ್ಲಾ ಪಾಸ್'ಗಳು ಮತ್ತೆ ಆರಂಭಿಸಿದ ಜಿಲ್ಲಾಡಳಿತ ಮಂಡಳಿ

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದ್ದು ಸಂಪ್ರಾಯದಂತೆ ನವೆಂಬರ್​ 03 ರಂದು ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.
Published on

ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ಬಾಗಿಲು ತೆರೆಯುವ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಇರುವ ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದ್ದು ಸಂಪ್ರಾಯದಂತೆ ನವೆಂಬರ್​ 03 ರಂದು ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಅಕ್ಟೋಬರ್ 24 ರಂದು ಮಧ್ಯಾಹ್ನ 12:15 ಗಂಟೆಗೆ ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿತ್ತು. ಅಂದಿನಿಂದ ಇಂದಿನವರೆಗೂ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಬಂದು ಹಾಸನಾಂಬೆಯ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ದೀಪಾವಳಿ ದಿನವೂ ದೇವಿಯ ದರ್ಶನಕ್ಕೆ ಭಕ್ತ ಗಣ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದೆ. ಹೀಗಾಗಿ ದೇವಾಲಯದ ಧರ್ಮದರ್ಶನದ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ.

ಹಾಸನಾಂಬೆಯ ನೈವೇದ್ಯಕ್ಕಾಗಿ ರಾತ್ರಿ 12 ಗಂಟೆಗೆ ಅರ್ಚಕರು ಬಾಗಿಲು ಮುಚ್ಚಿದ್ದರು. ಮತ್ತೆ ಇಂದು ಬೆಳಗಿನ ಜಾವ 4 ಗಂಟೆಗೆ ಬಾಗಿಲು ತೆರೆದಿದ್ದು, ದರ್ಶನ ಆರಂಭಿಸಲಾಗಿದೆ.

ದರ್ಶನದ ಸಂಬಂಧ ಹಲವು ಸಮಸ್ಯೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಸಿಬ್ಬಂದಿ ನಿನ್ನೆಯಿಂದ ವಿವಿಐಪಿ ಹಾಗೂ ವಿಐಪಿ ಪಾಸ್​ಗಳನ್ನು ರದ್ದು ಮಾಡಿ ಎಲ್ಲರಿಗೂ ಸಾಮಾನ್ಯ ದರ್ಶನದಲ್ಲಿ ಕಳುಹಿಸಲಾಗುತ್ತಿದೆ. ನಾಳೆ ಬೆಳಗಿನ ಜಾವ 4 ಗಂಟೆವರೆಗೆ ನಿರಂತವಾಗಿ ದೇವಿ ದರ್ಶನಕ್ಕೆ ಭಕ್ತರಿಗೆ ಸಿಗಲಿದೆ. ಬಳಿಕ ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ.

Hasanamba temple
ಹಾಸನಾಂಬೆ ದರ್ಶನ: ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ

ಈ ನಡುವೆ ರಜ್ಜು ಮಾಡಿದ್ದ ವಿಐಪಿ ಸೇರಿ ಎಲ್ಲಾ ರೀತಿಯ ಪಾಸ್ ಗಳನ್ನು ಜಿಲ್ಲಾಡಳಿತ ಮಂಡಳಿ ಮತ್ತೆ ಆರಂಭ ಮಾಡಿದೆ. ಈ ಹಿಂದೆ ದೇಗುಲದ ವಿಐಪಿ ಸಂಸ್ಕೃತಿಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಜನಸಂದಣಿ ನಿರ್ವಹಣೆಯಲ್ಲಿನ ಲೋಪಕ್ಕೆ ಜಿಲ್ಲಾಡಳಿತವೇ ಕಾರಣ ಎಂದು ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಪಾಸ್ ಗಳನ್ನು ಜಿಲ್ಲಾಡಳಿತ ರದ್ದು ಮಾಡಿತ್ತು.

ಶುಕ್ರವಾರ ಯಾವುದೇ ತೊಂದರೆಯಿಲ್ಲದೆ ಭಕ್ತರು ಶೀಘ್ರಗತಿಯಲ್ಲಿ ದರ್ಶನ ಪಡೆದರು ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಹೇಳಿದ್ದಾರೆ.

ದೇವಸ್ಥಾನದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ನೂಕುನುಗ್ಗಲು ತಪ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ವಿಐಪಿ ಮತ್ತು ವಿವಿಐಪಿ ಪಾಸ್‌ಗಳನ್ನು ರದ್ದು ಮಾಡಿದ ಬಳಿಕ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪರಿಸ್ಥಿತಿ ಶಾಂತವಾಯಿತು ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಶನಿವಾರ ಕೊನೆಯ ದಿನವಾಗಿದ್ದು, ಭಾನುವಾರ ದೇವಾಲಯವನ್ನು ಮುಚ್ಚಲಾಗುತ್ತದೆ. ಈ ವರ್ಷ ದೇಗುಲಕ್ಕೆ 7 ಕೋಟಿ ರೂ.ಗೂ ಹೆಚ್ಚಿನ ಆದಾಯ ಹರಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.

X

Advertisement

X
Kannada Prabha
www.kannadaprabha.com