ಶಕ್ತಿ ಯೋಜನೆ ನಡೆಸುವುದು ಸ್ವಲ್ಪ ಕಷ್ಟವಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ನಡೆಸುವುದು ಕಷ್ಟವಾಗುತ್ತಿದೆ. ಆದರೆ, ಯೋಜನೆಯನ್ನು ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ ಮುಂದುವರೆಸುತ್ತೇವೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (ಸಂಗ್ರಹ ಚಿತ್ರ)
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಶಕ್ತಿ ಯೋಜನೆ ನಡೆಸುವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಶನಿವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ನಡೆಸುವುದು ಕಷ್ಟವಾಗುತ್ತಿದೆ. ಆದರೆ, ಯೋಜನೆಯನ್ನು ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ ಮುಂದುವರೆಸುತ್ತೇವೆಂದು ಹೇಳಿದರು.

ಅನ್ನಭಾಗ್ಯ ಯೋಜನೆ ಅಡಿ ನೇರನಗದು ವರ್ಗಾವಣೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲ ಮಹಿಳೆಯರಿಗೂ ಇದರ ಪ್ರಯೋಜನ ದೊರೆಯುತ್ತಿದೆ. ಈ ಯೋಜನೆ ಅಡಿ ಯಾವ ಮಹಿಳೆಯರು ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹೀಗಾಗಿ ಇದನ್ನು ನಡೆಸುವುದು ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೂ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ತಿಳಿಸಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (ಸಂಗ್ರಹ ಚಿತ್ರ)
'ಶಕ್ತಿ ಯೋಜನೆ' ಪರಿಷ್ಕರಣೆ ಹೇಳಿಕೆ: ಡಿಸಿಎಂ ಡಿಕೆ ಶಿವಕುಮಾರ್ ಗೆ ವೇದಿಕೆಯಲ್ಲೇ ಖರ್ಗೆ ತರಾಟೆ

ಕೆಲವು ಮಹಿಳೆಯರು ತಾವು ಟಿಕೆಟ್ ಖರೀದಿಸಿ ಪ್ರಯಾಣ ಮಾಡುತ್ತೇವೆ. ಶಕ್ತಿ ಯೋಜನೆ ಬೇಕಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು.. ಇದು ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ, ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ, ಈ ಮೊದಲು ಹೇಳಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದರು. ಖರ್ಗೆ ಹೇಳಿಕೆ ವಿಚಾರ ಪ್ರಸ್ತಾಪಿಸಿದ್ದ ಪ್ರಧಾನಿ ಮೋದಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದುರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com