ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏಕಮುಖ ವಿಶೇಷ ರೈಲು ಸಂಚಾರ

ರೈಲು ಸಂಖ್ಯೆ 07357 ಎಸ್ಎಸ್ಎಸ್ ಹುಬ್ಬಳ್ಳಿ-ಎಸ್ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ಏಕಮುಖ ವಿಶೇಷ ರೈಲು ಆಗಿದೆ.
Hubballi Raliway Station
ಹುಬ್ಬಳ್ಳಿ ರೈಲು ನಿಲ್ದಾಣ
Updated on

ಹುಬ್ಬಳ್ಳಿ: ದೀಪಾವಳಿ ಹಬ್ಬದ ನಂತರದ ಅವಧಿ ಮತ್ತು ವಾರಾಂತ್ಯದಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು ನವೆಂಬರ್ 3 ರಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ.

ರೈಲು ಸಂಖ್ಯೆ 07357 ಎಸ್ಎಸ್ಎಸ್ ಹುಬ್ಬಳ್ಳಿ-ಎಸ್ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ಏಕಮುಖ ವಿಶೇಷ ರೈಲು ಆಗಿದೆ.

ನ.3ರಂದು ಮಧ್ಯಾಹ್ನ 12ಗಂಟೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು, ಹಾವೇರಿ (1.10/1.12pm), ಹರಿಹರ (1.50/1.52pm), ದಾವಣಗೆರೆ (2.10/2.12pm), ಅರಸೀಕೆರೆ (4.35/4.45pm), ತುಮಕೂರು (6.10/6.12pm) ನಿಲ್ದಾಣಗಳ ಮೂಲಕ ಅದೇ ದಿನ ರಾತ್ರಿ 8.15 ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ.

Hubballi Raliway Station
ಸಾಲು ಸಾಲು ಹಬ್ಬ: ರಾಜ್ಯದ ವಿವಿಧ ಭಾಗಗಳಿಗೆ ನೈರುತ್ಯ ರೈಲ್ವೆ ವಿಶೇಷ ರೈಲುಗಳ ವ್ಯವಸ್ಥೆ

ಈ ವಿಶೇಷ ರೈಲು 11 ಬೋಗಿಗಳನ್ನು ಒಳಗೊಂಡಿರುತ್ತದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com