ದೀಪಾವಳಿ ಆಚರಣೆಗೆ ಬಂದಿದ್ದಾಗ ದುರ್ಘಟನೆ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ದೀಪಾವಳಿ ಹಬ್ಬಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಚಿಕ್ಕಬಳ್ಳಾಪುರ: ದೀಪಾವಳಿ ಹಬ್ಬಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು 27 ವರ್ಷದ ರಂಜಿತ್, 24 ವರ್ಷದ ರಮ್ಯಾ ಮತ್ತು 21 ವರ್ಷದ ಅಭಿಲಾಶ್ ಎಂದು ಗುರುತಿಸಲಾಗಿದೆ. ಊಟದ ನಂತರ ಈಜಾಡಲು ಕೆರೆಗೆ ಇಳಿದಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀನಿವಾಸಪುರ ಮೂಲದ ಎಸ್. ರಂಜೀತ್ ಕುಮಾರ್, ರಾಮನಗರ ಮೂಲದ ರಮ್ಯಾ, ಚಂದಾಪುರ ಮೂಲದ ಅಭಿಲಾಷ್ ಸಂಬಂಧಿಕರ ಮನೆಗೆ ಬಂದಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್​ಪಿ ಕುಶಲ್ ಚೌಕ್ಸೆ, ಎಎಸ್ಪಿ ಆರ್.ಐ ಖಾಸಿಂ, ಡಿವೈಎಸ್​ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಗ್ರಹ ಚಿತ್ರ
ದೀಪಾವಳಿ ಸಂಭ್ರಮ: ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ 40 ಮಂದಿಗೆ ಗಾಯ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com