ಉಡುಪಿ: ನಿಂತಿದ್ದ ಟ್ರಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ 15 ಯಾತ್ರಾರ್ಥಿಗಳು ಗಾಯಗೊಂಡಿರುವ ಘಟನೆ ಉದ್ಯಾವರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ತಮಿಳುನಾಡು ನೋಂದಾಯಿತ ಮಿನಿ ಬಸ್‌ನಲ್ಲಿದ್ದ 18 ಯಾತ್ರಾರ್ಥಿಗಳ ತಂಡ ನಿನ್ನೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತವಾಗಿದೆ.
ಮಂಗಳೂರಿನಿಂದ ಹೊರಟಿದ್ದ ಮಿನಿ ಬಸ್ ಭಾನುವಾರ ಬೆಳಿಗ್ಗೆ 6.45 ರ ಸುಮಾರಿಗೆ ಪೆಟ್ರೋಲ್ ಪಂಪ್ ಬಳಿ ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಿನಿ ಬಸ್ ನಲ್ಲಿದ್ದ 18 ಜನರಲ್ಲಿ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿವೆ. ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳಡು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
Advertisement