ವಕ್ಫ್ ಆಸ್ತಿ ವಿವಾದ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ವಕ್ಫ್ ಗೆಜೆಟ್ ನೋಟಿಫಿಕೇಷನ್ ರದ್ದತಿಗೆ ಆಗ್ರಹಿಸಿ ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಬಳಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
R. Ashok led Protest in Bengaluru
ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ
Updated on

ಬೆಂಗಳೂರು: ರಾಜ್ಯದ ವಿವಿಧೆಡೆ ರೈತರ ಜಮೀನನ್ನು ವಕ್ಶ್ ಆಸ್ತಿ ಎಂದು ನಮೂದಿಸಿರುವ ಆರೋಪ ಕೇಳಿಬಂದ ನಂತರ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ 'ಲ್ಯಾಂಡ್ ಜಿಹಾದಿ'ಯಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರತಿಪಕ್ಷ ಆಗ್ರಹಿಸಿತು.

ವಕ್ಫ್ ಗೆಜೆಟ್ ನೋಟಿಫಿಕೇಷನ್ ರದ್ದತಿಗೆ ಆಗ್ರಹಿಸಿ ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಬಳಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ಈ ವೇಳೆ ಮಾತನಾಡಿದ ಯತ್ನಾಳ, ತಿಕ್ಕೋಟಾ ತಾಲೂಕಿನ ಹೊನಾವಡಾದ ಸುಮಾರು 1,200 ಎಕರೆ ಜಮೀನನ್ನು ವಕ್ಫ್ ಭೂಮಿ ಎಂದು ನಮೂದಿಸಲಾಗಿದ್ದು, ಗೆಜೆಟ್ ನೋಟಿಫಿಕೇಷನ್ ದೋಷದಿಂದ ಇದು ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳುತ್ತಿದ್ದಾರೆ. ಈ ಗೊಂದಲದ ಬಗ್ಗೆ ಸ್ಪಷ್ಟನೆ ನೀಡಬೇಕು. ಈ ಸಮಸ್ಯೆ ಸಂಪೂರ್ಣವಾಗಿ ಇತ್ಯರ್ಥವಾಗುವವರೆಗೂ ಈ ವಿಚಾರ ಬಿಡುವುದಿಲ್ಲ, ಶೋಭಾ ಕರಂದ್ಲಾಜೆ ಅವರೊಂದಿಗೆ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದೇನೆ. ನಾವು ಗಟ್ಟಿಯಾಗಿದ್ದರೆ ನಮ್ಮ ರೈತರು, ಮಠಗಳ ಆಸ್ತಿ ನಮ್ಮೊಂದಿಗೆ ಇರುತ್ತವೆ. ಈ ಪ್ರತಿಭಟನೆ ಇಲ್ಲಿಯೇ ಮುಕ್ತಾಯವಾಗುವುದಿಲ್ಲ, ರಾಜ್ಯಾದ್ಯಂತ ನಡೆಸಲಿದ್ದೇವೆ ಎಂದು ತಿಳಿಸಿದರು.

ಶೋಭಾ ಕರಂದ್ಲಾಜೆ ಮಾತನಾಡಿ, 43 ಪುರಾತತ್ವ ಇಲಾಖೆಯ ನಿವೇಶನಗಳನ್ನು ವಕ್ಫ್ ಆಸ್ತಿ ಎಂದು ಹೇಳಲಾಗುತ್ತಿದೆ. ಒಂದುವೇಳೆ ಎಲ್ಲವೂ ವಕ್ಫ್ ಆಸ್ತಿ ಎಂದು ಹೇಳಿದರೆ ಇದು ಸಂಚು ಅಲ್ಲದೇ ಬೇರೆನೂ ಅಲ್ಲ. ರಾಜ್ಯದಲ್ಲಿ ಏನು ನಡೆಯುತ್ತಿದೆ? ಏನು ಮಾಡಲು ಪ್ರಯತ್ನಿಸಲಾಗುತ್ತಿದೆ?ಲ್ಯಾಂಡ್ ಜಿಹಾದಿ ನಡೆಯುತ್ತಿದೆ. ಷರಿಯಾ ಕಾನೂನು ಜಾರಿಗೆ ಪ್ರಯತ್ನಿಸುತ್ತಿದೆಯೇ? ಕರ್ನಾಟಕದಲ್ಲಿ ಇದು ಸಾಧ್ಯವಿಲ್ಲ ಎಂದರು.

ಬಳ್ಳಾರಿಯಲ್ಲಿ ಬಿ. ವೈ. ವಿಜಯೇಂದ್ರ, ಕೆಆರ್ ಪುರಂನಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯದ ವಿವಿಧೆಡೆ ನಡೆದ ಪ್ರತಿಭಟನೆಯಲ್ಲಿ ಪಕ್ಷದ ವಿವಿಧ ನಾಯಕರು ಪಾಲ್ಗೊಂಡರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಖಾನ್‌ನಂತಹ ದೇಶದ್ರೋಹಿಯೊಂದಿಗೆ ಸಿದ್ದರಾಮಯ್ಯ ಪಿತೂರಿ ನಡೆಸುತ್ತಿದ್ದಾರೆ ಮತ್ತು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜಮೀರ್ ಅಹ್ಮದ್ ಕಾನ್ ಸಚಿವರಾಗಿ ರಾಜ್ಯಾದ್ಯಂತ ಸಂಚರಿಸಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಮಠಗಳ ಭೂಮಿಯನ್ನು ವಕ್ಫ್ ಭೂಮಿ ಎಂದು ಹೇಳಲಾಗಿದೆ. ಸುಮಾರು 15,000 ಕ್ಕೂ ಹೆಚ್ಚು ರೈತರ ಜಮೀನನ್ನು ವಕ್ಫ್ ಭೂಮಿ ಎಂದು ಹೇಳಲಾಗುತ್ತಿದೆ. ನಿಮಗೆ ದಮ್ಮಿದ್ದರೆ, ಪ್ರಾಮಾಣಿಕರಾಗಿದ್ದರೆ ವಕ್ಫ್ ಜಮೀನು ಒತ್ತುವರಿ ಮಾಡಿಕೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದರು.

R. Ashok led Protest in Bengaluru
ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ವಕ್ಫ್ ಆಸ್ತಿ ಕಾಪಾಡುವುದಾಗಿ ಘೋಷಿಸಿತ್ತು: ಸಿಎಂ ಸಿದ್ದರಾಮಯ್ಯ ತಿರುಗೇಟು

ಸಿಎಂ ಸಿದ್ದರಾಮಯ್ಯ ಮೇಲೆ ರೈತರಿಗೆ ನಂಬಿಕೆ ಇಲ್ಲ. ಮುಸ್ಲಿಂರ ಓಲೈಕೆಗಾಗಿ ಕರ್ನಾಟಕವನ್ನು ಸಿದ್ದರಾಮಯ್ಯ ನಾಶ ಮಾಡುತ್ತಿದ್ದಾರೆ. ವಕ್ಫ್ ಬೋರ್ಡ್ ಅದಿಲ್ ಶಾಹಿ, ಘಜ್ನಿ ಮೊಹಮ್ಮದ್, ಬಾಬರ್ ಮಂಡಳಿ ಆಗಿದೆ ಎಂದು ಆರೋಪಿಸಿದರು. ಮಂಗಳೂರು, ಮೈಸೂರು, ಬೆಳಗಾವಿ, ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯಿತು. ಕೆಲವು ಸ್ಥಳಗಳಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com