ಸಿಪಿ ಯೋಗೇಶ್ವರ್ ವಿರುದ್ಧ ಮಾತನಾಡದಂತೆ ಮಲಮಗಳು ನಿಶಾ ವಿರುದ್ಧ ತಡೆಯಾಜ್ಞೆ ತಂದ ಪಿವಿ ಶೀಲಾ!

ಸಿಪಿ ಯೋಗೇಶ್ವರ್‌ ಪತ್ನಿ ಪಿ.ವಿ ಶೀಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ಪೀಠ ಸಾಮಾಜಿಕ ಜಾಲತಾಣಗಳಲ್ಲಿ ಸಿಪಿ ಯೋಗೇಶ್ವರ್ ವಿರುದ್ಧ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನಿಶಾಗೆ ತಡೆಯಾಜ್ಞೆ ನೀಡಿದೆ.
CP Yogeshwar-Nisha Yogeshwar
ಸಿಪಿ ಯೋಗೇಶ್ವರ್-ನಿಶಾ ಯೋಗೇಶ್ವರ್
Updated on

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ನಿಂದ ಸಿಪಿ ಯೋಗೇಶ್ವರ್ ಹಾಗೂ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮಧ್ಯೆ ನೇರ ಹಣಾಹಣಿ ನಡೆಯುತ್ತಿದೆ. ಈ ಮಧ್ಯೆ ಪುತ್ರಿ ನಿಶಾ ಯೋಗೇಶ್ವರ್ ಗೆ ತಂದೆ ಸಿಪಿ ಯೋಗೇಶ್ವರ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ನಿರ್ಬಂಧ ವಿಧಿಸಿದೆ.

ಸಿಪಿ ಯೋಗೇಶ್ವರ್‌ ಪತ್ನಿ ಪಿ.ವಿ ಶೀಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ಪೀಠ ಸಾಮಾಜಿಕ ಜಾಲತಾಣಗಳಲ್ಲಿ ಸಿಪಿ ಯೋಗೇಶ್ವರ್ ವಿರುದ್ಧ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಯೋಗೇಶ್ವರ್ ಅವರ ಮೊದಲ ಪತ್ನಿಯ ಪುತ್ರಿ ನಿಶಾಗೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಿದೆ.

ಸಿಪಿ ಯೋಗೇಶ್ವರ್ ಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿ, ಆಧಾರರಹಿತ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಚಾರಣೆ ವೇಳೆ ಪಿವಿ ಶೀಲಾ ಅವರು ಕೋರ್ಟ್ ಗಮನಕ್ಕೆ ತಂದರು.

CP Yogeshwar-Nisha Yogeshwar
ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿರುವ ಜನರು ಸಿಪಿ ಯೋಗೇಶ್ವರ್'ರನ್ನು ತಿರಸ್ಕರಿಸುತ್ತಾರೆ: HDK

ಈ ಸಂಬಂಧ ಪ್ರತಿವಾದಿಗಳಾದ instagram, X Corp, Google ಮತ್ತು Youtubeಗೆ ನಿಶಾ ಯೋಗೇಶ್ವರ್‌ ಅವರ ನಿಂದನಾತ್ಮಕ ಹೇಳಿಕೆಗಳನ್ನು ಅಪ್‌ಲೋಡ್‌ ಮಾಡದಂತೆ, ಈಗಾಗಲೇ ಪ್ರಸಾರ ಮಾಡಲಾಗಿರುವ ತುಣಕುಗಳನ್ನು ತಡೆಹಿಡಿಯಬೇಕೆಂದು ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com