ಬರಾಕ್ ಒಬಾಮಾ
ಬರಾಕ್ ಒಬಾಮಾ

ಬೆಳಗಾವಿ ಜಂಟಿ ಅಧಿವೇಶನ: ಬರಾಕ್ ಒಬಾಮಾಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಸಂದಿದೆ.
Published on

ಹಾವೇರಿ: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಜಂಟಿ ಅಧಿವೇಶನ ಮತ್ತು ಮಹಾತ್ಮ ಗಾಂಧಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿದ್ದಾರೆ.

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಸಂದಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಒಬಾಮ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮಹಾತ್ಮಾ ಗಾಂಧಿಯವರು 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿತ್ತು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್​ ಕೆ ಪಾಟೀಲ್ ಅವರು​, ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿ ಪತ್ರ ಬರೆದಿದ್ದಾರೆ. ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿಯೇ ನಡೆಸಲಾಗುವುದು ಎಂದು ತಿಳಿಸಿದರು.

ಬರಾಕ್ ಒಬಾಮಾ
ಬೆಳಗಾವಿ ಜಂಟಿ ಅಧಿವೇಶನ: ಅಮೆರಿಕಾ ಮಾಜಿ ಅಧ್ಯಕ್ಷ ಒಬಾಮಾಗೆ ಸರ್ಕಾರ ಆಹ್ವಾನ- HK ಪಾಟೀಲ್

ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು. ಅಕ್ಟೋಬರ್ 2 ರಿಂದ ಒಂದು ವರ್ಷ ಕಾಲ ಶತಮಾನೋತ್ಸವ ವರ್ಷಾಚರಣೆ ನಡೆಯಲಿದೆ ಎಂದು ಎಚ್ ಕೆ ಪಾಟೀಲ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಹತ್ವ ಪಡೆಯಲು ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಕರೆಸಲು ಉದ್ದೇಶಿಸಲಾಗಿದೆ. ಗಾಂಧೀಜಿಯ ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com