ಗದಗ: ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಎಂದು ಗುರುತಿಸಲಾಗಿದೆ.
ಮಂಜುನಾಥ ಅವರು ಮೊದಲು ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷದ ವೇದಾಂತ, ನಾಲ್ಕು ವರ್ಷದ ಪವನ್ ಹಾಗೂ ಆರು ವರ್ಷದ ಧನ್ಯಾ ನದಿ ಪಾಲಾದ ದುರ್ವೈವಿ ಮಕ್ಕಳು.
ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡರಗಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Advertisement