ಸಂಗ್ರಹ ಚಿತ್ರTNIE
ರಾಜ್ಯ
ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: 1 ತಿಂಗಳ ಗಂಡು ಮಗುವನ್ನು ಟ್ಯಾಂಕ್‌ಗೆ ಎಸೆದು ಕೊಂದ ದುಷ್ಕರ್ಮಿಗಳು
ಅನ್ಯಜಾತಿಗೆ ಸೇರಿದ ದಂಪತಿ ಪೋಷಕರ ವಿರೋಧದ ನಡುವೆಯೇ ಮದುವೆಯಾಗಿದ್ದರು. ಹೀಗಾಗಿ ತಮ್ಮ ಪೋಷಕರಿಗೆ ಗೊತ್ತಿರುವವರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ಒಂದು ತಿಂಗಳ ಮೂರು ದಿನದ ಗಂಡು ಮಗುವನ್ನು ಅಪರಿಚಿತ ದುಷ್ಕರ್ಮಿಗಳು ಮನೆಯ ಓವರ್‌ಹೆಡ್ ನೀರಿನ ಟ್ಯಾಂಕ್‌ಗೆ ಎಸೆದು ಕೊಲೆ ಮಾಡಿದ್ದಾರೆ. ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಇಗ್ಗಲೂರಿನಲ್ಲಿ ಈ ಘಟನೆ ನಡೆದಿದ್ದು ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನ್ಯಜಾತಿಗೆ ಸೇರಿದ ದಂಪತಿ ಪೋಷಕರ ವಿರೋಧದ ನಡುವೆಯೇ ಮದುವೆಯಾಗಿದ್ದರು. ಹೀಗಾಗಿ ತಮ್ಮ ಪೋಷಕರಿಗೆ ಗೊತ್ತಿರುವವರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ