ಬೆಳಗಾವಿ: ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ!

ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಆತ್ಮಹತ್ಯೆ (ಸಾಂಕೇತಿಕ ಚಿತ್ರ)
ಆತ್ಮಹತ್ಯೆ (ಸಾಂಕೇತಿಕ ಚಿತ್ರ)
Updated on

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.

ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ ಎಂದು ಗುರುತಿಸಲಾಗಿದೆ.

ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಈಗ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಯೇ ರುದ್ರಣ್ಣ ನೇಣಿಗೆ ಶರಣಾಗಿದ್ದಾರೆ.

ತಹಶೀಲ್ದಾರ್ ಕಚೇರಿ ಸಿಬ್ಬಂದಿ ಕಚೇರಿ ತೆರೆದಾಗ ರುದ್ರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಆತ್ಮಹತ್ಯೆ (ಸಾಂಕೇತಿಕ ಚಿತ್ರ)
ಖ್ಯಾತ ನಿರ್ದೇಶಕ, ನಟ ಗುರು ಪ್ರಸಾದ್ ನಿಧನ; ಆತ್ಮಹತ್ಯೆ ಶಂಕೆ

ಇದರ ಬೆನ್ನಲ್ಲೇ ಮೇಲಧಿಕಾರಿಗಳ ಕಿರುಕುಳ ಆರೋಪ ಕೇಳಿಬಂದಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರುದ್ರಣ್ಣ ಯಡವಣ್ಣವರ ತಂದೆ ಕೂಡ ಸರ್ಕಾರಿ ಉದ್ಯೋಗದಲ್ಲಿದ್ದಾಗಲೇ ಮೃತಪಟ್ಟಿದ್ದರಿಂದ ಅನುಕಂಪದ ಆಧಾರದ ಮೇಲೆ ಇವರಿಗೆ ಉದ್ಯೋಗ ದೊರಕಿತ್ತು ಎಂದು ತಿಳಿದುಬಂದಿದೆ.

ಇದೀಗ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಮತ್ತು ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಖಡೇಬಜಾ‌ರ್ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com