ಬೆಂಗಳೂರು: 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆದ ಅಭ್ಯರ್ಥಿಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
ಅಕ್ಟೋಬರ್ 3 ರಂದು ಪರೀಕ್ಷೆ ನಡೆದಿತ್ತು. ಕೇವಲ 33 ದಿನಗಳಲ್ಲಿ ಪರೀಕ್ಷೆಯ ಪತ್ರಿಕೆ 1 ಮತ್ತು 2 ರಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದರೆ ಇದೇ 9 ರೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು. ಅಂತಿಮ ಸರಿ(ಕೀ) ಉತ್ತರಗಳನ್ನು ಕೂಡಾ ಬಿಡುಗಡೆ ಮಾಡಲಾಗಿದೆ. ಸರಿ ಉತ್ತರಗಳಿಗೆ ಸಂಬಂಧಿಸಿದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
Advertisement