ಹಾವೇರಿ: ಹಾವೇರಿಯ ತಡಸ ಗ್ರಾಮದ ತಾಯವ್ವ ದೇವಿ ದೇವಸ್ಥಾನಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಯುವಕರ ತಂಡವೊಂದು ಜೋರಾಗಿ ಮೋದಿ ಮೋದಿ ಎಂದು ಘೋಷಣೆ ಕೂಗಿದ್ದು ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ತಾಯವ್ವ ದೇವಿ ದೇವಸ್ಥಾನಕ್ಕೆ ಜಾತ್ರೆಯ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸಿಎಂ ಕಾರಿನಲ್ಲಿ ಹೋಗುತ್ತಿದ್ದಾಗ ಅಲ್ಲಿ ನೆರೆದಿದ್ದ ಯುವಕರು ಮೋದಿ... ಮೋದಿ.. ಎಂದು ಜೋರಾಗಿ ಕೂಗಿದರು.
ಸಿಎಂ ಸಿದ್ದರಾಮಯ್ಯ ಅವರ ಎದುರು ಯುವಕರ ತಂಡವೊಂದು ಮೋದಿ ಪರ ಘೋಷಣೆ ಕೂಗುತ್ತಿರುವ ವಿಡಿಯೋವನ್ನು karnataka portfolio ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Advertisement