ಬೆಂಗಳೂರು: ನಗರದ ಪ್ರತಿಷ್ಠಿತ ಬಿಷಪ್ ಕಾಟನ್ ಶಾಲೆಯ ವೆಬ್ ಸೈಟ್ ಗೆ ಗುರುವಾರ ಹುಸಿ ಬಾಂಬ್ ಬೆದರಿಕೆ ಸಂದೇಶ ಬರುವುದರೊಂದಿಗೆ ಶಾಲೆಯ ಆಡಳಿತ ಮಂಡಳಿ,ವಿದ್ಯಾರ್ಥಿಗಳು ಹಾಗೂ ಪೋಷಕರು ಕೆಲಕಾಲ ಆತಂಕಗೊಂಡಿದ್ದರು.
ಸಂಜೆ ಇ-ಮೇಲ್ ಪರಿಶೀಲನೆ ವೇಳೆಯಲ್ಲಿ ಬಾಂಬ್ ಬೆದರಿಕೆ ಸಂದೇಶ ಆಡಳಿತ ಮಂಡಳಿ ಗಮನಕ್ಕೆ ಬಂದಿದ್ದು, ಕೂಡಲೇ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರಗೆ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಬಳಿಕ ಬಾಂಬ್ ನಿಷ್ಕ್ರೀಯ ದಳ, ಬಾಂಬ್ ತಪಾಸಣೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶಾಲಾ ಆವರಣದಲ್ಲಿ ತಪಾಸಣೆ ನಡೆಸಿದ್ದು, ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ.
ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement