ಸಚಿವ ಈಶ್ವರ್ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ

ಹನುಮ ಜಾತ್ರೆಯಲ್ಲಿ ಗುಂಪು ಘರ್ಷಣೆ: ಚಳಕಾಪುರದಲ್ಲಿ ಶಾಂತಿ ಸ್ಥಾಪನೆಗೆ ಸಚಿವ ಈಶ್ವರ್ ಖಂಡ್ರೆ ಮನವಿ

ಬೀದರ್‌ ಜಿಲ್ಲೆ ಹಿಂದೂ, ಮುಸ್ಲಿಂ, ಸಿಖ್‌, ಕ್ರೈಸ್ತ ಎಲ್ಲ ಸಮುದಾಯದವರೂ ಸೌಹಾರ್ದತೆಯಿಂದ ಬಾಳುವ ಜಿಲ್ಲೆಯಾಗಿದ್ದು, ಸರ್ವ ಜನಾಂಗದ ಶಾಂತಿಯ ತೋಟವೆಂದು ಹೆಸರಾಗಿದೆ.
Published on

ಬೀದರ್: ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಎರಡು ಸಮುದಾಯದವರ ನಡುವೆ ನಡೆದಿರುವ ಗುಂಪು ಘರ್ಷಣೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಸಚಿವ ಈಶ್ವರ್ ಖಂಡ್ರೆಯವರು, ಶಾಂತಿ ಮರು ಸ್ಥಾಪನೆಗೆ ಎಲ್ಲರೂ ಸಹಕರಿಸಬೇಕೆಂದು ಬುಧವಾರ ಮನವಿ ಮಾಡಿದ್ದಾರೆ.

ಈ ಕುರಿತು ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೀದರ್‌ ಜಿಲ್ಲೆ ಹಿಂದೂ, ಮುಸ್ಲಿಂ, ಸಿಖ್‌, ಕ್ರೈಸ್ತ ಎಲ್ಲ ಸಮುದಾಯದವರೂ ಸೌಹಾರ್ದತೆಯಿಂದ ಬಾಳುವ ಜಿಲ್ಲೆಯಾಗಿದ್ದು, ಸರ್ವ ಜನಾಂಗದ ಶಾಂತಿಯ ತೋಟವೆಂದು ಹೆಸರಾಗಿದೆ. ಜಾತಿಯತೆಯ ನಿರ್ಮೂಲನೆಗೆ ಶ್ರಮಿಸಿದ ಬಸವಾದಿ ಶರಣರ ನಾಡಿನಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಅಪಾರ ಗೌರವ ನೀಡಲಾಗುತ್ತದೆ. ಇಂತಹ ಭಾವೈಕ್ಯತೆಯ ನೆಲದಲ್ಲಿ ನಡೆಯುವ ಸಣ್ಣ ಘಟನೆಗಳು ಜಿಲ್ಲೆಯ ಕೀರ್ತಿಗೆ ಚ್ಯುತಿ ತರುತ್ತವೆ ಎಂದು ಹೇಳಿದ್ದಾರೆ.

ಸಚಿವ ಈಶ್ವರ್ ಖಂಡ್ರೆ
ಬೀದರ್: ಜಾತ್ರೆಗೆ ಬಂದಿದ್ದಕ್ಕೆ ಪರಿಶಿಷ್ಟ ಪಂಗಡದವರ ಮೇಲೆ ಸವರ್ಣೀಯರಿಂದ ಹಲ್ಲೆ; 73 ಮಂದಿ ವಿರುದ್ಧ FIR ದಾಖಲು!

ಈ ಕಹಿ ಘಟನೆಯನ್ನು ಎಲ್ಲರೂ ಮರೆತು ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ.

ಚಳಕಾಪುರ ಗ್ರಾಮದಲ್ಲಿ ನಡೆದಿರುವ ಘಟನೆ ಅತ್ಯಂತ ನೋವಿನ ಸಂಗತಿಯಾಗಿದೆ. ಆದರೂ ಬೀದರ್ ನ ಜನತೆ ಪ್ರಜ್ಞಾವಂತರಾಗಿದ್ದು, ಸಮಾಜವನ್ನು ಸುಸ್ಥಿತಿಗೆ ತರಲು ಸಹಕರಿಸಬೇಕು, ಶಾಂತಿ ಕದಡಬಾರದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿ, ಶಾಂತಿ ಸಭೆ ನಡೆಸಿ, ಶಾಂತಿ ಮರುಸ್ಥಾಪಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com