ಕೋಲಾರ: ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ; ಯಾವುದೇ ಪ್ರಾಣಹಾನಿ ಇಲ್ಲ, Video

ಬಂಗಾರಪೇಟೆ ಪೊಲೀಸರ ಪ್ರಕಾರ, "ರಾಜ್ ಕುಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯ ನವೀಕರಣದ ಸಮಯದಲ್ಲಿ ಕಟ್ಟಡ ಕುಸಿದಿದೆ.
Three-story building collapse in Bangarpet
ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ
Updated on

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರದ ದಂಡು ರಸ್ತೆಯ ಬಳಿ ಶುಕ್ರವಾರ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಬಂಗಾರಪೇಟೆ ಪೊಲೀಸರ ಪ್ರಕಾರ, "ರಾಜ್ ಕುಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯ ನವೀಕರಣದ ಸಮಯದಲ್ಲಿ ಕಟ್ಟಡ ಕುಸಿದಿದೆ. ಮನೆಯಲ್ಲಿದ್ದ ಮೂರು ಕುಟುಂಬಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ".

ಕಳೆದ ಎರಡು ತಿಂಗಳ ಹಿಂದೆಯೇ ಈ ಮನೆಯನ್ನು ಖಾಲಿ ಮಾಡಲಾಗಿತ್ತು. ಹೀಗಾಗಿ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡ ಕುಸಿತದಿಂದ ಖಾಸಗಿ ಶಾಲೆಯ ಕಾಂಪೌಂಡ್‌ಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com