ಬೆಂಗಳೂರು: ಹೊಂಗಸಂದ್ರದ ಮನೆಯೊಳಗೆ ಕೊಲೆಯಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಗೃಹಿಣಿ ಜಯಮ್ಮ ಎಂದು ಗುರುತಿಸಲಾಗಿದೆ. 20 ವರ್ಷಗಳ ಹಿಂದೆ ಪತಿಯಿಂದ ಬೇರ್ಪಟ್ಟಿದ್ದ ಆಕೆಗೆ ಇಬ್ಬರು ಗಂಡು ಮಕ್ಕಳಿದ್ದಾರೆ.
ಜಯಮ್ಮ ಕರೆಗಳನ್ನು ಸ್ವೀಕರಿಸದಿದ್ದಾಗ ಆಕೆಯ ಸ್ನೇಹಿತರೊಬ್ಬರು ಮನೆಗೆ ಪರೀಕ್ಷಿಸಲು ಬಂದಿದ್ದಾರೆ. ಎಷ್ಟು ಬಾಗಿಲು ಬಡಿದರೂ ತೆರೆಯದ ಕಾರಣ ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದು, ಬೇರೆ ಕೀಯೊಂದಿಗೆ ಬಾಗಿಲು ತೆರೆದಾಗ ಆಕೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಲೆಯಲ್ಲಿ ಒಂದು ಗಾಯದ ಗುರುತು ಹೊರತುಪಡಿಸಿ ಬೇರೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ. ಇದು ಆಕೆಯನ್ನು ಹತ್ಯೆ ಮಾಡಿರುವ ಅನುಮಾನಕ್ಕೆ ಕಾರಣವಾಗಿದೆ. ಆದಾಗ್ಯೂ, ಸಾವಿಗೆ ನಿಖರವಾದ ಕಾರಣವನ್ನು ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗಿದೆ.
ಘಟನೆಯ ವೇಳೆ ಬಸ್ ಚಾಲಕನಾಗಿ ಆನೇಕಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆಕೆಯ ಕಿರಿಯ ಮಗ ಪೊಲೀಸರಿಂದ ತಾಯಿಯ ಸಾವಿನ ಬಗ್ಗೆ ತಿಳಿದುಕೊಂಡಿದ್ದಾನೆ. ಜಯಮ್ಮ ತನ್ನ ಕಿರಿಯ ಮಗನೊಂದಿಗೆ ವಾಸಿಸುತ್ತಿದ್ದಳು. ಹಿರಿಯ ಮಗನೊಂದಿಗೆ ಇರಲಿಲ್ಲ, ಆತನೇ ಕೊಲೆಯಲ್ಲಿ ಭಾಗಿಯಾಗಿರಬಹುದೆಂಬ ಅನುಮಾನವಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಧಿಕಾರಿ ಹೇಳಿದರು. ಅಪರಾಧಿ ಬಂಧನ ಹಾಗೂ ಕೊಲೆಯ ಹಿಂದಿನ ಉದ್ದೇಶ ತಿಳಿಯಲು ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement