ಇನ್ನು ಮೂರೂವರೆ ವರ್ಷ ನಾನೇ CM: ಸಿದ್ದರಾಮಯ್ಯ ಪುನರುಚ್ಚಾರ; ನಾಯಕತ್ವ ಬದಲಾವಣೆ ಕುರಿತು ವಲಯದಲ್ಲಿ ಮತ್ತೆ ಸಂಚಲನ

ಸಿದ್ದರಾಮಯ್ಯ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ಗೊತ್ತಾಗಿದೆ. ಹೀಗಾಗಿ ನನ್ನನ್ನು ಮುಗಿಸಲು ಸಿಬಿಐ, ಇಡಿ, ಐಡಿಯನ್ನು ಬಳಸಿಕೊಂಡು ಷಡ್ಯಂತ್ರ ಮಾಡುತ್ತಿದ್ದಾರೆ.
Siddaramaiah
ಸಿದ್ದರಾಮಯ್ಯ
Updated on

ಬೆಂಗಳೂರು: ಇನ್ನು ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪುನರುಚ್ಛರಿಸಿದ್ದು, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ನಡುವಲ್ಲೇ ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಸಂಡೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಸುತ್ತೇನೆ. ಸಿದ್ದರಾಮಯ್ಯ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ಗೊತ್ತಾಗಿದೆ. ಹೀಗಾಗಿ ನನ್ನನ್ನು ಮುಗಿಸಲು ಸಿಬಿಐ, ಇಡಿ, ಐಡಿಯನ್ನು ಬಳಸಿಕೊಂಡು ಷಡ್ಯಂತ್ರ ಮಾಡುತ್ತಿದ್ದಾರೆಂದು ಹೇಳಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ವಿಚಾರವನ್ನು ಸಿದ್ದರಾಮಯ್ಯ ಅವರು ಮತ್ತೊಮ್ಮೆ ಪ್ರಸ್ತಾಪಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಅಹಿಂದ ಮತದಾರರನ್ನು ಅದರಲ್ಲೂ ಕುರುಬ ಮತಗಳನ್ನು ಧ್ರುವೀಕರಿಸುವ ಕಾರ್ಯತಂತ್ರದ ಭಾಗವಾಗಿ ಮತ್ತು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ರೀತಿಯ ಹೇಳಿಕೆ ನೀಡಿರಬಹುದು ಎಂದು ಹೇಳಲಾಗುತ್ತಿದೆ.

ಉಪಚುನಾವಣೆಯ 3 ಕ್ಷೇತ್ರಗಳ ಪೈಕಿ ಸಿದ್ದರಾಮಯ್ಯ ಅವರು ಅಹಿಂದ ಪ್ರಾಬಲ್ಯವಿರುವ ಕ್ಷೇತ್ರವಾಗಿರುವ ಸಂಡೂರಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದರಂತೆ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಅವರಿಗೆ ಸಲಹೆ ನೀಡಿದ್ದರು. ಇನ್ನು ಚನ್ನಪಟ್ಟಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ್'ಗೆ ಸಲಹೆ ನೀಡಿ ಯೋಗೇಶ್ವರ್ ಅವರಿಗೆ ಟಿಕೆಟ್ ದೊರೆಯುವಂತೆ ಮಾಡಿದ್ದರು.

Siddaramaiah
ಉಪ ಚುನಾವಣೆ: ಮೂರೂ ಪಕ್ಷಗಳಿಗೆ ಪ್ರತಿಷ್ಠೆ ಕಣ, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಸವಾಲು!

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ಮುಡಾ ಹಗರಣದ ಆರೋಪಿಯಾಗಿದ್ದು, ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಕಾಂಗ್ರೆಸ್ ಶಾಸಕರಲ್ಲಿ ವಿಶ್ವಾಸ ಮೂಡಿಸಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಅವರು ಯಾವಾಗ ರಾಜೀನಾಮೆ ನೀಡುತ್ತಾರೆಂಬುದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿದಿದೆ. ಶೀಘ್ರದಲ್ಲೇ ಆ ಸಮಯ ಬರಲಿದ್ದು, ಕೆಲವು ಸಮುದಾಯಗಳ ಮತಗಳ ಸೆಳೆಯಲು ಸಿಎಂ ಆಗಿ ಮುಂದುವರಿಯುವುದಾಗಿ ಹೇಳಿಕೊಂಡಿದ್ದಾರೆಂದು ಹೇಳಿದ್ದಾರೆ.

ಶಿಗ್ಗಾಂವಿಯಲ್ಲಿ ಈ ಬಾರಿ ಬಿಜೆಪಿ ಜಯಭೇರಿ ಬಾರಿಸಲಿದೆ. ಚನ್ನಪಟ್ಟಣ, ಸಂಡೂರಿನಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಆ ಸ್ಥಾನವೂ ಕೈ ತಪ್ಪುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮ ಇತರೆ ಕೆಲಸಗಳನ್ನು ಬದಿಗಿಟ್ಟು ಸಂಡೂರಿನಲ್ಲಿ ಬೀಡು ಬಿಟ್ಟಿದ್ದಾರೆಂದು ತಿಳಿಸಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ದೊಡ್ಡ ವ್ಯಕ್ತಿ. ಪ್ರಸ್ತುತ ಸಿಎಂ ಆಗಿದ್ದರೂ, ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆಂದು ಹೇಳುತ್ತಿದ್ದಾರೆಂದು ವ್ಯಂಗ್ಯವಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com