ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಶನಿವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹಗಳು ಕಾರ್ ನಲ್ಲಿಯೇ ಛಿದ್ರವಾಗಿವೆ. ಹೀಗಾಗಿ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಕನಕಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement