ಮಂಗಳೂರು: 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ

ನಾಲ್ವರೂ ಅಪರಾಧಿಗಳು ಮಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ತಿರುವೈಲು ಗ್ರಾಮದ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿಯ ಪೋಷಕರು ಕೂಡ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.
Representational image
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ನವೆಂಬರ್ 21, 2021 ರಂದು ಜಾರ್ಖಂಡ್‌ನ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮೂವರು ವಲಸೆ ಕಾರ್ಮಿಕರಿಗೆ ಮರಣದಂಡನೆ ವಿಧಿಸಲಾಗಿದೆ.

ಮಧ್ಯಪ್ರದೇಶದ ಜೈಬನ್ ಆದಿವಾಸಿ, (21) ಮುಖೇಶ್ ಸಿಂಗ್ (20), ಮತ್ತು ಜಾರ್ಖಂಡ್‌ನ ರಾಂಚಿಯ 33 ವರ್ಷದ ಮನೀಶ್ ಟಿರ್ಕಿ ಎಂದು ಗುರುತಿಸಲಾಗಿದೆ. ನಾಲ್ಕನೇ ಆರೋಪಿ ಮಧ್ಯಪ್ರದೇಶ ಮೂಲದ ಮುನೀಮ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ. ನಾಲ್ವರೂ ಅಪರಾಧಿಗಳು ಮಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ತಿರುವೈಲು ಗ್ರಾಮದ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿಯ ಪೋಷಕರು ಕೂಡ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ ಬದ್ರಿನಾಥ್ ನಾಯರಿ, ಆರೋಪಿಯು ನವೆಂಬರ್ 21, 2021 ರಂದು ತನ್ನ ಸಹೋದರನೊಂದಿಗೆ ಆಟವಾಡುತ್ತಿದ್ದ ಬಾಲಕಿಗೆ ಸಿಹಿತಿಂಡಿ ನೀಡಿ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅವರು ಅಸ್ವಾಭಾವಿಕ ಲೈಂಗಿಕತೆಯಿಂದ ಆಕೆಯನ್ನು ಹಿಂಸಿಸಿ ನಂತರ ಆಕೆಯ ಕತ್ತು ಹಿಸುಕಿ ಸಾಯಿಸಿದ್ದಾರೆ. ಮಂಗಳೂರಿನ ಪೋಕ್ಸೊ ನ್ಯಾಯಾಲಯವು ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಮೊದಲ ಪ್ರಕರಣ ಇದಾಗಿದೆ ಎಂದು ಬದರಿನಾಥ್ ಹೇಳಿದರು. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಸೆಕ್ಷನ್ 120 (ಬಿ), 366 (ಎ), 376 ಡಿಬಿ, 377, 302 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಮಾರು 30 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು. ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮನು ಕೆ.ಎಸ್ ಅವರು ಗುರುವಾರ ಶಿಕ್ಷೆ ವಿಧಿಸಿದರು. ಸಂತ್ರಸ್ತೆಯ ಪೋಷಕರಿಗೆ 1,20,000 ರೂಪಾಯಿ ದಂಡವನ್ನು ಪಾವತಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸಂತ್ರಸ್ತೆಯ ಸಂಬಂಧಿಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 3,80,000 ರೂ.ಗಳ ಪರಿಹಾರವನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ.

Representational image
Karnataka: ಅತ್ಯಾಚಾರ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಶೇ. 0.36ರಷ್ಟು ಮಾತ್ರ!

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com