KIADB ಭೂಮಿಯನ್ನು ಶೀಘ್ರ BMRCL ಗೆ ವರ್ಗಾಯಿಸಿ: ಸಿಎಂ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಉತ್ತರ ಕ್ಷೇತ್ರದ ಹೆಬ್ಬಾಳದಲ್ಲಿ ಬಹು ಮಾದರಿಯ ಸಾರಿಗೆ ಕೇಂದ್ರವನ್ನು ನಿರ್ಮಿಸಲು ಯೋಜಿಸುತ್ತಿದೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆTNIE
Updated on

ಬೆಂಗಳೂರು: 45 ಎಕರೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿಯನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್‌ಸಿಎಲ್‌) ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಆವರು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಉತ್ತರ ಕ್ಷೇತ್ರದ ಹೆಬ್ಬಾಳದಲ್ಲಿ ಬಹು ಮಾದರಿಯ ಸಾರಿಗೆ ಕೇಂದ್ರವನ್ನು ನಿರ್ಮಿಸಲು ಯೋಜಿಸುತ್ತಿದೆ. ಅತ್ಯಂತ ಅಗತ್ಯವಿರುವ ಈ ಯೋಜನೆಯು ಜನ ದಟ್ಟಣೆಯನ್ನು ಕಡಿಮೆ ಮಾಡುವುದಲ್ಲದೇ, ಮೆಟ್ರೋ ಬಳಕೆದಾರರಿಗೆ ವೇಗದ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲಿದೆ.

ಶೋಭಾ ಕರಂದ್ಲಾಜೆ
ಸಿಎಂ ಸಿದ್ದರಾಮಯ್ಯ, ಕುಟುಂಬಕ್ಕೆ ಬೈರತಿ ಸುರೇಶ್ ಕಳಂಕ ತಂದಿದ್ದಾರೆ: ಶೋಭಾ ಕರಂದ್ಲಾಜೆ

ಬಹು-ಹಂತದ ಪಾರ್ಕಿಂಗ್, ಡಿಪೋ ಸೇರಿದಂತೆ ಅತ್ಯಾಧುನಿಕ ಹಬ್‌ ನಿರ್ಮಾಣಕ್ಕಾಗಿ 45 ಎಕರೆಯ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) ಮೆಟ್ರೊಗೆ ವರ್ಗಾಯಿಸಲು 2024ರ ಮಾರ್ಚ್ʼನಲ್ಲಿ ಬಿಎಂಆರ್‌ಸಿಎಲ್ ವಿನಂತಿಸಿಕೊಂಡಿತ್ತು. ನಮ್ಮ ಮೆಟ್ರೋದ ಕಾರ್ಯದಕ್ಷತೆ ಹೆಚ್ಚಿಸಲು ಈ ಭೂಮಿ ಅತ್ಯವಶ್ಯಕವಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ಸಮಯೋಚಿತ ನಿರ್ಧಾರವು ಕಾಮಗಾರಿಯ ಹೆಚ್ಚಿನ ವೆಚ್ಚವನ್ನು ನಿಯಂತ್ರಿಸುತ್ತದೆ ಹಾಗೂ ನಾಗರಿಕರ ಜೀವನದ ಗುಣಮಟ್ಟ ಹೆಚ್ಚಿಸುತ್ತದೆ. ಭಾರತ ಸರ್ಕಾರದ ಸಂಪೂರ್ಣ ಬೆಂಬಲದೊಂದಿಗೆ ಬೆಂಗಳೂರನ್ನು ಮತ್ತಷ್ಟು ಅಭಿವೃದ್ಧಿಪಡಿಸೋಣ. ಈ ನಿಟ್ಟಿನಲ್ಲಿ ಕೆಐಎಡಿಬಿಯ ಭೂಮಿಯನ್ನು ಶೀಘ್ರವೇ ‌ಬಿಎಂಆರ್‌ಸಿಎಲ್‌ಗೆ ವರ್ಗಾಯಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com