ಮೈಸೂರು: ಖಾಸಗಿ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡನಿಂದ ಸಚಿವರಿಗೆ ಕಪಾಳಮೋಕ್ಷ..!

ಚುನಾಯಿತ ಪ್ರತಿನಿಧಿಯೊಬ್ಬರು ಆಯೋಜಿಸಿದ್ದ ಮಗಳ ನಿಶ್ಚಿತಾರ್ಥ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
congress
ಕಾಂಗ್ರೆಸ್ online desk
Updated on

ಮೈಸೂರು: ಮೈಸೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಸಚಿವರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದು, ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಚುನಾಯಿತ ಪ್ರತಿನಿಧಿಯೊಬ್ಬರು ಆಯೋಜಿಸಿದ್ದ ಮಗಳ ನಿಶ್ಚಿತಾರ್ಥ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಸಚಿವರು ಕಾಂಗ್ರೆಸ್ ಮುಖಂಡನ ಎದುರಿಗೆ ಬಂದು ಹಗುರವಾದ ಧಾಟಿಯಲ್ಲಿ ಮಾತನಾಡಿದ್ದು, ಈ ವೇಳೆ ಕೆರಳಿದ ಕಾಂಗ್ರೆಸ್ ಮುಖಂಡ ಸಚಿವರಿಗೆ ಕಪಾಳ ಮೋಕ್ಷ ಮಾಡಿದರು ಎಂದು ತಿಳಿದುಬಂದಿದೆ. ಈ ಘಟನೆ ಸುತ್ತಮುತ್ತಲಿನ ಜನರ ಹುಬ್ಬೇರುವಂತೆ ಮಾಡಿದೆ.

congress
ಮೈಸೂರು ಕೃಷಿ ಅಧಿಕಾರಿಗಳ ಬಂಧನ: ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು- ಕುಮಾರಸ್ವಾಮಿ

ಸಚಿವ ಹಾಗೂ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಇಬ್ಬರೂ ಹಲವು ವರ್ಷಗಳಿಂದ ಪರಿಚಿತರಾಗಿದ್ದು, ಸ್ಥಳದಲ್ಲಿ ಹೆಚ್ಚು ಜನರಿದ್ದ ಕಾರಣ ಸಚಿವರ ಬೆಂಬಲಿಗರು ಗಲಾಟೆಯನ್ನು ಮಾಡದೆ ಸ್ಥಳದಿಂದ ತೆರಳಿದ್ದರು ಎಂದು ಹೇಳಲಾಗುತ್ತಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು, ಇಬ್ಬರ ನಡುವೆ ವರ್ಗಾವಣೆ ದಂಧೆ ಹಣ ಹಂಚಿಕೆ ವಿಚಾರದಲ್ಲಿ ಗಲಾಟೆಯಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಈ ದಂಧೆ ವಿಚಾರವಾಗಿಯೇ ಮೈಸೂರಿನಲ್ಲಿ ಸಚಿವರು, ಮತ್ತಿತರರು ಹೊಡೆದಾಡಿಕೊಂಡಿದ್ದಾರೆಂಬ ಮಾಹಿತಿ ಇದೆ. ಒಬ್ಬ ಸಚಿವರನ್ನು ಬಹಿರಂಗವಾಗಿ ಹೊಡೆದಿದ್ದಾರೆ. ರಾಜ್ಯದ ಸ್ಥಿತಿ ಎಲ್ಲಿಗೆ ಬಂದಿದೆ ನೋಡಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com