Zameer Ahmed Khan
ಸಚಿವ ಜಮೀರ್ ಅಹ್ಮದ್ ಖಾನ್

MUDA Case: ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್ ಗೂ ಶಾಕ್; ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚನೆ

ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.
Published on

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಶಾಕ್ ನೀಡಿದ್ದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇದೀಗ ಅವರ ಆಪ್ತ ಸಚಿವ ಜಮೀರ್ ಅಹ್ಮದ್ ಗೂ ಆಘಾತ ನೀಡಿದ್ದಾರೆ.

ಹೌದು.. ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ (Karnataka High Court) ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿದ್ದಾರೆ.

ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಅವರು ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Zameer Ahmed Khan
50:50 ಅನುಪಾತದಲ್ಲಿ ಸೈಟ್‌ ಹಂಚಿಕೆ ರದ್ದು: ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ

ಪೊಲಿಟಿಕಲ್ ತೀರ್ಪು ಎಂದಿದ್ದ ಜಮೀರ್

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿಜೆ ಅಬ್ರಾಹಮ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕೋರ್ಟ್​ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್​ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು.

ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ ಪಾಠ ಕಲಿಸುವುದಾಗಿ ಹೇಳಿದ್ದರು.

ಜಮೀರ್ ಅಹಮ್ಮದ್ ಖಾನ್ ಅವರು ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅಹಮ್ಮದ್ ಖಾನ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅಬ್ರಾಹಂ ಕಿಡಿಕಾರಿದ್ದರು. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

X

Advertisement

X
Kannada Prabha
www.kannadaprabha.com