ಜಸ್ಟೀಸ್ ಮೈಕಲ್ ಕುನ್ಹಾ ಕುರಿತು ಹೇಳಿಕೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
Dinesh Gundurao and Krishna byregowda appeal Governor Gehlot
ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
Updated on

ಬೆಂಗಳೂರು: ಕೋವಿಡ್ ಭ್ರಷ್ಟಾಚಾರಗಳ ಕುರಿತು ಮೈಕಲ್ ಕುನ್ಹಾ ಅವರ ಆಯೋಗದ ವರದಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು ಮಾಡಿರುವ ಬೆನ್ನಲ್ಲೇ ಜಸ್ಟೀಸ್ ಕುನ್ಹಾ ಅವರನ್ನ ಕಾಂಗ್ರೆಸ್ ಏಜೇಂಟ್ ಎಂದು ಕರೆದ ಪ್ರಲ್ಹಾದ್ ಜೋಶಿ ಹೇಳಿಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ದೂರು ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಿವೃತ್ತ ನ್ಯಾಯಮೂರ್ತಿಯಾಗಿ ಜಸ್ಟೀಸ್ ಕುನ್ಹಾ ಅವರು ಅತ್ಯಂತ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಿದವರು. ಗೌರವಾನ್ವಿತರ ಬಗ್ಗೆ ಕೇಂದ್ರ ಸಚಿವರಾಗಿ ಪ್ರಲ್ಹಾದ್ ಜೋಶಿ ವಯಕ್ತಿಕ ನಿಂದನೆ ಮಾಡಿ ಮಾತನಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಪ್ರಲ್ಹಾದ್ ಜೋಶಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಪ್ರಲ್ಹಾದ್ ಜೋಶಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.

ಕೇಂದ್ರ ಸಚಿವರು ಎಂದಾಕ್ಷಣ ಏನು ಬೇಕಾದರು ಮಾತನಾಡಬಹುದು ಎಂಬ ಅಹಂಕಾರ ಪ್ರವೃತ್ತಿಯಲ್ಲಿ ಪ್ರಲ್ಹಾದ್ ಜೋಶಿಯವರಿದ್ದಾರೆ. ಇತ್ತಿಚೆಗೆ ಜೋಶಿ ಅವರು ಹೇಳಿಕೆಗಳು ಅಹಂಕಾರದಿಂದ ಕೂಡಿವೆ. ಜಸ್ಟೀಸ್ ಆಗಿದ್ದವರನ್ನ ಕಾಂಗ್ರೆಸ್ ಏಜೆಂಟ್ ಎಂದರೆ ಏನರ್ಥ.. ಜೋಶಿಯವರು ರಾಜಕಾರಣಿಗಳಾದ ನಮ್ಮ ಮೇಲೆ ಮಾತನಾಡಲಿ. ಅಥವಾ ಕಾನೂನು ಹೋರಾಟ ನಡೆಸಲಿ. ಆದರೆ ಗೌರವಾನ್ವಿತ ನ್ಯಾಯಮೂರ್ತಿಗಳ ವೈಯಕ್ತಿಕ ನಿಂಧನೆ ಸರಿಯಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Dinesh Gundurao and Krishna byregowda appeal Governor Gehlot
ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ನೋಡಿಲ್ಲ- CM: ಜಾನ್ ಮೈಕೆಲ್ ಡಿ ಕುನ್ಹಾ ನೀವು ನ್ಯಾಯಾಧೀಶರು, ಏಜೆಂಟ್ ಅಲ್ಲ- ಜೋಶಿ

ಕುನ್ಹಾ ಅವರ ಆಯೋಗ ಅಂತಿಮ ವರದಿ ಸಲ್ಲಿಸುವ ಮುನ್ನ ಅವರ ಮೇಲೆ ಒತ್ತಡ ತರುವ ಪ್ರಯತ್ನವನ್ನ ಪ್ರಲ್ಜಾದ್ ಜೋಶಿ ನಡೆಸಿಸುತ್ತಿದ್ದಾರೆ. ಕುನ್ಹಾ ಅವರನ್ನ ಕಾಂಗ್ರೆಸ್ ಏಜೆಂಟ್ ಎಂದಿರುವುದು ಒತ್ತಡ ತಂತ್ರದ ಒಂದು ಭಾಗ. ವರದಿಯನ್ನ ವಿಮರ್ಷಿಸಲಿ. ಆದರೆ ಕುನ್ಹಾ ಅವರ ವೈಯಕ್ತಿಕ ನಿಂದನೆ ಸರಿಯಲ್ಲ. ಪ್ರಲ್ಜಾದ್ ಜೋಶಿ ಒಬ್ಬ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದವರು, ನಮ್ಮ ತನಿಖಾ ಆಯೋಗಗಳು, ವ್ಯವಸ್ಥೆಗಳ ವಿರುದ್ಧ ಮಾತನಾಡುತ್ತಿರುವುದು ದುರಂತ. ಈ ರೀತಿ ನಿಂದನೆಗಳನ್ನ ಮಾಡಿದರೆ ಮುಂದೆ ಯಾರು ಕೂಡ ತನಿಖೆ ನಡೆಸುವ ಜವಾಬ್ದಾರಿ ತೆಗೆದುಕೊಳ್ಳಲು ಮುಂದೆ ಬರದಿರುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಮಿಷನ್ inquiry act 1952 ಪ್ರಕಾರ ಪ್ರಲ್ಹಾದ್ ಜೋಶಿ ಅವರ ಹೇಳಿಕೆ ಕಾನೂನು ಬಾಹಿರವಾಗಿದೆ. 6 ತಿಂಗಳ ವರೆಗೆ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಈ ವಿಚಾರವನ್ನ ರಾಷ್ಟ್ರಪತಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ರಾಜ್ಯಪಾಲರು ನಮ್ಮ ಅಹಾವಾಲುಗಳನ್ನ ತಾಳ್ಮೆಯಿಂದ ಆಲೀಸಿದ್ದು, ಈ ರೀತಿಯ ವೈಯಕ್ತಿಕ ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com