ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ, ಜನ ಜಾಗೃತರಾಗಿರುವಂತೆ ದೇವೇಗೌಡರು ಸಂದೇಶ ನೀಡಿದ್ದಾರೆ: ಡಿ.ಕೆ ಶಿವಕುಮಾರ್ ಟಾಂಗ್

ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಜನ ಹುಷಾರಾಗಿರಬೇಕು ಎಂದು ತಿಳಿಸಿದರು.
DK Shivakumar
ಡಿಸಿಎಂ ಡಿ.ಕೆ ಶಿವಕುಮಾರ್online desk
Updated on

ಬೆಂಗಳೂರು: ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹೀಗಾಗಿ ಜನರು ಜಾಗೃತರಾಗಿರಬೇಕು ಎಂದು ದೇವೇಗೌಡರು ಸಂದೇಶ ನೀಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ ಅವರು, ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ನಿಲ್ಲಲಿದೆ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಜನ ಹುಷಾರಾಗಿರಬೇಕು ಎಂದು ತಿಳಿಸಿದರು.

ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದು, ಈ ಬಾರಿ ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಮೂರು ಕ್ಷೇತ್ರಗಲ್ಲಿ ಪ್ರಚಾರ ಮುಗಿಸಿದ್ದೇವೆ. ಬಿಜೆಪಿ ಏನೇ ತಂತ್ರ ಪ್ರಯೋಗಿಸಿದರೂ ಜನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದಂತೆ ಈ ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಮತ ಹಾಕಲಿದ್ದಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ವಸೂಲಿ ಬಗ್ಗೆ ಪ್ರಧಾನಿಗಳ ಆರೋಪದ ಬಗ್ಗೆ ಕೇಳಿದಾಗ, "ಇದು ಸುಳ್ಳು ಆರೋಪ, ಅವರನ್ನು ಯಾರೋ ದಾರಿತಪ್ಪಿಸಿದ್ದಾರೆ. ಈ ವಿಚಾರವಾಗಿ ಆರೋಪ ಸಾಬೀತುಪಡಿಸಿದರೆ ರಾಜಕೀಯ ತ್ಯಜಿಸುವುದಾಗಿ ಮುಖ್ಯಮಂತ್ರಿಗಳು ಬಹಿರಂಗ ಸವಾಲು ಹಾಕಿದ್ದಾರೆ. ಇದಕ್ಕಿಂತ ಬೇರೇನು ಬೇಕು?" ಎಂದು ಹೇಳಿದರು.

DK Shivakumar
ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಆಡಳಿತದ ರಾಜ್ಯಗಳು ಪಕ್ಷದ 'ಶಾಹಿ' ಪರಿವಾರಕ್ಕೆ ATM- ಪ್ರಧಾನಿ ಮೋದಿ ವಾಗ್ದಾಳಿ

ಕೋವಿಡ್ ಅಕ್ರಮ ವಿಚಾರದಲ್ಲಿ ನ್ಯಾ.ಕುನ್ಹಾ ಅವರ ಸಮಿತಿ ಸರ್ಕಾರದ ಏಜೆಂಟ್ ರಂತೆ ನಡೆದುಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅವರ ಪರವಾಗಿ ವರದಿ ಕೊಟ್ಟರೆ ಎಲ್ಲವೂ ನ್ಯಾಯಬದ್ಧವಾಗಿರುತ್ತವೆ. ಅವರ ವಿರುದ್ಧವಾಗಿ ನೀಡುವ ವರದಿ ಬಗ್ಗೆ ಹೀಗೆ ಆರೋಪ ಮಾಡುತ್ತಾರೆ. ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಅವರು ಯಾವುದೇ ಆರೋಪ ಮಾಡಿಕೊಳ್ಳಲಿ" ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com