ಬಿ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ: ಸಿಎಂ ಸಿದ್ದರಾಮಯ್ಯ ಸುಳಿವು

ಹೆಚ್.ಡಿ.ಕೋಟೆ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ನಾಯಕ ಸಮುದಾಯದವರ ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ ಈ ಮಾತುಗಳನ್ನಾಡಿದ್ದಾರೆ.
CM Siddaramaiah at programme in H D Kote of Mysuru district
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲ್ಲೂಕಿನಲ್ಲಿ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ವಾಲ್ಮೀಕಿ ಮಂಡಳಿ ಹಗರಣದ ವಿವಾದಗಳಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲುಪಾಲಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವ ಶಾಸಕ ಬಿ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ಇಂದು ಸುಮಾರು 443.64 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ನೆರೆದಿದ್ದ ಬೆಂಬಲಿಗರು ಮತ್ತು ನಾಯಕ ಸಮುದಾಯದವರಿಗೆ ಭರವಸೆ ನೀಡಿ ಮಾತನಾಡಿದ ಅವರು, ನಾಗೇಂದ್ರ ಅವರಿಗೆ ಶೀಘ್ರದಲ್ಲೇ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಿದರು.

ಹೆಚ್.ಡಿ.ಕೋಟೆ ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ನಾಯಕ ಸಮುದಾಯದವರ ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ ಈ ಮಾತುಗಳನ್ನಾಡಿದ್ದಾರೆ.

ಅನಿಲ್ ಬೆಂಬಲಿಗರು ಹಾಗೂ ರಾಜನಹಳ್ಳಿ ಮಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ನಾಗೇಂದ್ರ ಅವರಿಗೆ ಸ್ಥಾನ ನೀಡಲಾಗುವುದು, ನಾನು ಕೊಟ್ಟ ಮಾತಿನಿಂದ ಹಿಂದೆ ಸರಿಯುವುದಿಲ್ಲ ಎಂದು ಒತ್ತಿ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗದ ಆರೋಪಗಳನ್ನು ಬಿ ನಾಗೇಂದ್ರ ನಿರಾಕರಿಸುತ್ತಲೇ ಬಂದಿದ್ದರು. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು ಉಪ ಚುನಾವಣೆ ಮುಗಿದ ಬಳಿಕ ಸಂಪುಟಕ್ಕೆ ಸೇರ್ಪಡೆಯಾಗಬಹುದು ಎನ್ನಲಾಗುತ್ತಿದೆ.

ನಾಯಕ ಸಮುದಾಯದ ಎಚ್‌ಡಿ ಕೋಟೆ ಶಾಸಕ ಸಿ ಅನಿಲ್ ಕುಮಾರ್ ಅವರ ಬೆಂಬಲಿಗರು ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿದರು, ಸಮುದಾಯದ ಪಾತ್ರವನ್ನು ಎತ್ತಿಹಿಡಿದು ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸಿದರು.

ತಮ್ಮ ಆದ್ಯತೆ ನಾಗೇಂದ್ರ ಅವರನ್ನು ಸಂಪುಟಕ್ಕೆ ಮರುಸೇರ್ಪಡೆ ಮಾಡುವುದಾಗಿದ್ದು, ಮುಂದಿನ ದಿನಗಳಲ್ಲಿ ಅನಿಲ್ ಅವರಿಗೂ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com