ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅವಾಂತರ ಸೃಷ್ಟಿಯಾಗಬಹುದು. ಹೌದು ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ನವೆಂಬರ್ 14ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಮಂಡ್ಯ, ಹಾಸನ, ಚಿತ್ರದುರ್ಗ, ಬೀದರ್, ಕೊಪ್ಪಳ, ವಿಜಯಪುರ, ದಾವಣಗೆರೆ, ತುಮಕೂರು, ರಾಮನಗರ, ಕೋಲಾರ, ಗದಗ, ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ತುಂತುರು ಮಳೆಯಾಗಿದೆ.
Advertisement