ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ: BJP ವಿರುದ್ಧ ಸಿದ್ದರಾಮಯ್ಯ

ಹೇಗಾದರೂ ಮಾಡಿ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬ ಹುನ್ನಾರ ಆರಂಭಿಸಿದ್ದಾರೆ. ಅದಕ್ಕಾಗಿಯೇ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ...
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ತಮ್ಮ ಸರ್ಕಾರವನ್ನು ಉರುಳಿಸಲು ಪ್ರತಿಪಕ್ಷ ಬಿಜೆಪಿಯು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ.ಗಳನ್ನು ನೀಡುವ ಆಮಿಷ ಒಡ್ಡಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು ಜಿಲ್ಲೆಯ ಹೊರಳಹಳ್ಳಿಯಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ, 'ತಾವು ಬಡವರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ಶೋಷಿತರಿಗೆ, ಹಿಂದುಳಿದವರಿಗೆ, ಪರಿಶಿಷ್ಟ ಜಾತಿ/ಜನಾಂಗದವರಿಗೆ ಸಹಾಯ ಮಾಡುತ್ತಿರುವುದು ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಸರಿ ಕಾಣುತ್ತಿಲ್ಲ, ಹಾಗಾಗೇ ಏನಾದರೂ ಮಾಡಿ ತನ್ನನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.

ಸರ್ಕಾರ ಉರುಳಿಸಲು ನಮ್ಮ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ನೀಡುವ ಆಮಿಷ ಒಡ್ಡಿದ್ದಾರೆ. ಆದರೆ ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಇದನ್ನು ಒಪ್ಪಲಿಲ್ಲ, ಈ ಕಾರಣದಿಂದ ಬಿಜೆಪಿಯವರು ಈಗ ತಮ್ಮ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲು ಮುಂದಾಗಿದ್ದಾರೆ ಎಂದು ಹೇಳಿದರು.

CM Siddaramaiah
ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಅಂತೆಯೇ ನನ್ನ ತಂಟೆಗೆ ಬಂದರೆ ಕರ್ನಾಟಕದ ಜನತೆ ಸುಮ್ಮನಿರಲ್ಲ ಎಂದು ಎಚ್ಚರಿಸಿದ ಸಿದ್ದರಾಮಯ್ಯ, 'ಸಿದ್ದರಾಮಯ್ಯ ಸರ್ಕಾರವನ್ನು ಹೇಗಾದರೂ ಉರುಳಿಸಲು ಬಿಜೆಪಿಯವರು 50 ಶಾಸಕರಿಗೆ 50 ಕೋಟಿ ರೂ. ಆಮಿಷ ಒಡ್ಡಿದ್ದಾರೆ. ಆದರೆ ಇಷ್ಟೊಂದು ಹಣ ಎಲ್ಲಿಂದ ತಂದರು? ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹಣ ಮುದ್ರಿಸಿದ್ದಾರಾ? ಇದೆಲ್ಲಾ "ಲಂಚದ ಹಣ" ಆಗಿತ್ತು..

ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ, ಆ ಹಣವನ್ನು ಬಳಸಿಕೊಂಡು ಪ್ರತಿ ಶಾಸಕರಿಗೆ 50 ಕೋಟಿ ರೂ. ನೀಡುವುದಾಗಿ ಆಮಿಷ ಒಡ್ಡಿದ್ದಾರೆ. ಆದರೆ ಈ ಬಾರಿ ನಮ್ಮ ಯಾವೊಬ್ಬ ಶಾಸಕರೂ ಅದಕ್ಕೆ ಒಪ್ಪಿಗೆ ನೀಡಲಿಲ್ಲ. ಅದಕ್ಕಾಗಿಯೇ ಹೇಗಾದರೂ ಮಾಡಿ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬ ಹುನ್ನಾರ ಆರಂಭಿಸಿದ್ದಾರೆ. ಅದಕ್ಕಾಗಿಯೇ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಜನ ಗಮನಿಸುತ್ತಿದ್ದಾರೆ!

ಗ್ಯಾರಂಟಿ ಯೋಜನೆಗಳಿಗೆ ಜಾತಿ ಇಲ್ಲ, ಎಲ್ಲ ಜಾತಿಯವರು ಯೋಜನೆಗಳ ಫಲಾನುಭವಿಗಳು; ಹಾಗೆಯೇ ಈ ಯೋಜನೆಗಳು ಕೇವಲ ಕಾಂಗ್ರೆಸ್​ಗೆ ವೋಟು ಹಾಕಿದವವರಿಗೆ ಮಾತ್ರ ಅಲ್ಲ, ಬಿಜೆಪಿಯವರೂ ಅವುಗಳ ಫಲ ಉಣ್ಣುತ್ತಿದ್ದಾರೆ, ಈ ಸರ್ಕಾರದಿಂದ ಅನುಕೂಲವಾಗಿದೆ ಅಂತ ಜನರೇ ವಿರೋಧ ಪಕ್ಷಗಳಿಗೆ ಹೇಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com