ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ: ಮತದಾನ ಪ್ರಕ್ರಿಯೆ ಆರಂಭ, 45 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬುಧವಾರ ಆರಂಭವಾಗಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ.

ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ ಬಂದೋಬಸ್ತ್ ಕೈಗೊಂಡಿವೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖವಾಗಿ ಕಾಂಗ್ರೆಸ್​ನಿಂದ ಸಿ.ಪಿ.ಯೋಗೇಶ್ವರ ಮತ್ತು ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮಧ್ಯೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳಿದ್ದು, 62 ನಗರ ವ್ಯಾಪ್ತಿ ಹಾಗೂ 214 ಗ್ರಾಮಾಂತರ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಒಟ್ಟು 2,32,949 ಮತದಾರರಿದ್ದು, 1,12,324 ಪುರುಷ ಹಾಗೂ 1,20,617 ಮಹಿಳಾ ಮತದಾರರಿದ್ದಾರೆ. 8 ಜನ ತೃತೀಯ ಲಿಂಗಿಗಳಿದ್ದಾರೆ. 85 ವರ್ಷಕ್ಕೂ ಮೇಲ್ಪಟ್ಟ ಒಟ್ಟು 1,613 ಮತದಾರರಲ್ಲಿ 612 ಪುರುಷರು ಹಾಗೂ 1,001 ಮಹಿಳೆಯರಿದ್ದಾರೆ. 3,011 ಜನ ದಿವ್ಯಾಂಗರಲ್ಲಿ 1,669 ಪುರುಷ ಹಾಗೂ 1,342 ಮಹಿಳಾ ಮತದಾರರಿದ್ದಾರೆ. ಇನ್ನು 8,338 ಯುವ ಮತದಾರರಿದ್ದಾರೆ. ಜೊತೆಗೆ 47 ಸೇವಾ ಮತದಾರರು ಮತಹಕ್ಕು ಹೊಂದಿದ್ದಾರೆ.

ಸಂಗ್ರಹ ಚಿತ್ರ
ಚನ್ನಪಟ್ಟಣ ಉಪಚುನಾವಣೆ: ಹರಿಯುತ್ತಿದೆ ಹಣದ ಹೊಳೆ; ಪ್ರತಿ ವೋಟಿಗೆ 3000 ರಿಂದ 6000 ರೂ!

ಶಿಗ್ಗಾಂವಿ ಕ್ಷೇತ್ರದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್​ನಿಂದ ಯಾಸೀರ್ ಖಾನ್ ಪಠಾಣ್ ನಡುವೆ ನೇರ ಹಣಾಹಣಿ ಇದೆ. ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ- 2,37,525. ಈ ಪೈಕಿ 1,21,443 ಪುರುಷರು ಮತ್ತು 1,16,076 ಮಹಿಳೆಯರು ಹಾಗೂ ಇತರ 6 ಮತದಾರರಿದ್ದಾರೆ. ಒಟ್ಟು 241 ಮತಗಟ್ಟೆಗಳಿದ್ದು, 92 ಸೂಕ್ಷ್ಮ ಮತ್ತು 141 ಸಾಮಾನ್ಯ ಮತಟ್ಟೆಗಳಿವೆ. ಭದ್ರತೆಗಾಗಿ ಎಸ್​​ಪಿ, ಎಎಸ್​​ಪಿ, 4 ಡಿವೈಎಸ್​​ಪಿ, 12 ಸಿ‌ಪಿಐ, 24 ಪಿಎಸ್​​ಐ, 68 ಎ‌ಎಸ್​​ಐ, ಸೇರಿ 716 ಪೊಲೀಸ್ ಸಿಬ್ಬಂದಿ ಜೊತೆಗೆ 4 ಕೆಎಸ್​ಆರ್​ಪಿ ಮತ್ತು ಡಿಆರ್ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಇನ್ನು ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಅನ್ನಪೂರ್ಣ ತುಕಾರಾಂ ಮತ್ತು ಎನ್​ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಕಣದಲ್ಲಿದ್ದಾರೆ. ಇಲ್ಲಿ ಒಟ್ಟು 253 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1,215 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದಾರೆ. ಈ ಪೈಕಿ 1,17,789 ಪುರುಷ ಮತ್ತು 1,18,282 ಮಹಿಳೆ ಹಾಗೂ 29 ತೃತೀಯ ಲಿಂಗಿ ಮತದಾರರು ಇದ್ದಾರೆ.

ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಜೀವ ವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರ ಉದ್ಯಮ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ ಹಾಗೂ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com