ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು. ಪೊಲೀಸ್‌ ಅಧಿಕಾರವು ಶಾಸನಬದ್ಧವಾಗಿದ್ದು, ಅದು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿದೆ.
ಕರ್ನಾಟಕ ಹೈ ಕೋರ್ಟ್
ಕರ್ನಾಟಕ ಹೈ ಕೋರ್ಟ್
Updated on

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್‌ ನಿಯಂತ್ರಣ ಕಾಯಿದೆ ಸೆಕ್ಷನ್‌ 35ಎ ಅಡಿ ವ್ಯಾಖ್ಯಾನವನ್ನು ಒಪ್ಪಲಾಗದು. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಕೋರಿಕೆಗೆ ಅನುಮತಿಸಿದರೆ ಪ್ರತಿಯೊಂದು ಬ್ಯಾಂಕಿಂಗ್‌ ಸಂಸ್ಥೆಯು ತನಿಖೆಗೆ ಕೋರಬಹುದು. ಹೀಗೆ ಮಾಡಿದರೆ ದೆಹಲಿ ಪೊಲೀಸ್‌ ಸ್ಥಾಪನಾ ಕಾಯಿದೆಯು ಅನುಪಯುಕ್ತವಾಗಲಿದೆ ಎಂದು ಪೀಠ

ರಾಜ್ಯ ಸರ್ಕಾರದ ಪರವಾಗಿ ವಾದಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ವಿ ಆಚಾರ್ಯ ಅವರು, ಯಾವುದೇ ಪ್ರಕರಣದ ತನಿಖೆ ನಡೆಸುವ ಅಂತರ್ಗತ ಅಧಿಕಾರ ಸಿಬಿಐಗೆ ಇಲ್ಲ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು. ಪೊಲೀಸ್‌ ಅಧಿಕಾರವು ಶಾಸನಬದ್ಧವಾಗಿದ್ದು, ಅದು ಸಾಂವಿಧಾನಿಕ ನಿಬಂಧನೆಗಳಿಗೆ ಅನುಗುಣವಾಗಿದೆ. ಸಿಬಿಐ ಎಂದರೆ ಕೇಂದ್ರ ಸರ್ಕಾರದ ಪ್ರತಿರೂಪ ಎಂದು ವಾದಿಸಿದರು.

ಕರ್ನಾಟಕ ಹೈ ಕೋರ್ಟ್
ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಯೂನಿಯನ್‌ ಬ್ಯಾಂಕ್‌ ಪ್ರತಿನಿಧಿಸಿದ್ದ ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ ಅವರು ಸಿಬಿಐ ಕೇಂದ್ರ ಸರ್ಕಾರದ ಪ್ರತಿರೂಪ ಎಂಬ ವಾದಕ್ಕೆ ಆಕ್ಷೇಪಿಸಿದರು. ಸಿಬಿಐ ಕೇಂದ್ರ ಸರ್ಕಾರದ ಪ್ರತಿರೂಪ ಎಂಬ ಕುರಿತು ವಾದಿಸಲು ಇಚ್ಛಿಸುವುದಿಲ್ಲ. ಅದು ಈ ಪ್ರಕರಣಕ್ಕೆ ಹೊಂದುವುದಿಲ್ಲ. ಇಂಥ ಪ್ರಕರಣದಲ್ಲಿ ಸಿಬಿಐ ಒಂದೇ ತನಿಖಾ ಸಂಸ್ಥೆ ಎಂದು ಆರ್‌ಬಿಐ ಹೇಳಿದೆ. ಬ್ಯಾಂಕಿಂಗ್‌ ಕ್ಷೇತ್ರದ ನಿರ್ವಹಣೆಗೆ ವ್ಯವಸ್ಥಿತ ಆಪತ್ತು ಎದುರಾದಾಗ ಬ್ಯಾಂಕಿಂಗ್‌ ನಿಯಂತ್ರಣ ಕಾಯಿದೆ ಸೆಕ್ಷನ್‌ 35ಎ ಅನ್ವಯಿಸುತ್ತದೆ ಎಂದು ವಾದಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com