ಸಚಿವ ಜಮೀರ್ ಖಾನ್ ಗೆ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ FIR

ಹಿಂದೂ ಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.
Puneeth Kerehalli
ಪುನೀತ್ ಕೆರೆಹಳ್ಳಿ
Updated on

ಬೆಂಗಳೂರು: ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಿಂದನೆ ಮಾಡಿದ ಆರೋಪದ ಮೇರೆಗೆ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, 'ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್​ ಅಹಮದ್ ಖಾನ್​ಗೆ ನಿಂದನೆ ಆರೋಪ ಹಿನ್ನೆಲೆ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ ಎಂದು ವರದಿ ಮಾಡಲಾಗಿದೆ.

Puneeth Kerehalli
'ಕಾಲಾ ಕುಮಾರಸ್ವಾಮಿ' ಹೇಳಿಕೆ: ಸಚಿವ ಜಮೀರ್ ವಜಾಗೊಳಿಸಿ; ಸಿಎಂಗೆ ಒಕ್ಕಲಿಗರ ಆಗ್ರಹ

ವರದಿಯಲ್ಲಿರುವಂತೆ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಜಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿದ್ದು, ಜೊತೆಗೆ ಪ್ರಾಣ ಬೆದರಿಕೆ ಕೂಡ ಹಾಕಿದ್ದಾರೆ. ಹಾಗಾಗಿ ಕೂಡಲೇ ಎಫ್​ಐಆರ್​ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಎಂದು ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ‘ಕಾಲಿಯಾ’ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಕಿಡಿ ಹೊತ್ತಿಸಿದೆ. ಇದೇ ವಿಚಾರವಾಗಿ ಪುನೀತ್ ಕೆರೆಹಳ್ಳಿ ಜಮೀರ್ ಅಹ್ಮದ್ ಖಾನ್​ ವಿರುದ್ಧ ಧರ್ಮ, ಜಾತಿ ಹೆಸರಿನಲ್ಲಿ ನಿಂದನೆ ಆರೋಪ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರ ವಿರುದ್ಧ ಇದೀಗ ಎಫ್​ಐಆರ್ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com