ರೀಲ್ಸ್ ಹುಚ್ಚಾಟ: ದೀಪಾವಳಿ ಆಚರಣೆ ಹೆಸರಿನಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ ವಿದ್ಯಾರ್ಥಿಗಳು, ವೀಡಿಯೋ ವೈರಲ್

ವಿದ್ಯಾರ್ಥಿ ತನ್ನ ಬೈಕ್ ನಲ್ಲಿದ್ದ ಪೆಟ್ರೋಲ್ ನ್ನು ಎಳೆದು ಕವರ್'ಗೆ ತುಂಬಿ, ಅದಕ್ಕೆ ಬತ್ತಿ ಹಾಕಿ, ಬೆಂಕಿ ಕೊಟ್ಟಿದ್ದಾರೆ. ಕವರ್ ಸ್ಫೋಟಗೊಳ್ಳುತ್ತಿದ್ದಂತೆ ಸುಮಾರು 10 ಅಡಿ ಎತ್ತರದವರೆಗೂ ಬೆಂಕಿ ಹೊರಚಿಮ್ಮಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹಾಸನ: ದಿಢೀರ್‌ ಖ್ಯಾತರಾಗಬೇಕೆಂಬ ಹವ್ಯಾಸಕ್ಕೆ ಅಂಟಿಕೊಂಡ ಯುವ ಜನತೆ ಇತ್ತೀಚಿನ ದಿನಗಳಲ್ಲಿ ರೀಲ್ಸ್ ಗೀಳಿಗೆ ಬಿದ್ದು ಸಾಮಾಜಿಕ ಜವಾಬ್ದಾರಿಗಳನ್ನೇ ಮರೆಯುತ್ತಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ದೀಪಾವಳಿ ನೆಪದಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಾಸನದ ರಾಜೀವ್ ಆಯುರ್ವೇದ ಕಾಲೇಜಿನ ಆಯುರ್ವೇದ ಮೆಡಿಸಿನ್ ಮತ್ತು ಸರ್ಜರಿ ಪದವಿ ವ್ಯಾಸಂಗ ಮಾಡುತ್ತಿರುವ ಲೋಕಕಿರಣ್ ಹೆಚ್ ಎಂಬಾತ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕಾಲೇಜಿನ ಪಕ್ಕದ ರಸ್ತೆಯಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ್ದಾನೆ. ವಿಡಿಯೋವನ್ನು ಲೋಕಕಿರಣ್ ಸ್ನೇಹಿತ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ.

ವಿದ್ಯಾರ್ಥಿ ತನ್ನ ಬೈಕ್ ನಲ್ಲಿದ್ದ ಪೆಟ್ರೋಲ್ ನ್ನು ಎಳೆದು ಕವರ್'ಗೆ ತುಂಬಿ, ಅದಕ್ಕೆ ಬತ್ತಿ ಹಾಕಿ, ಬೆಂಕಿ ಕೊಟ್ಟಿದ್ದಾರೆ. ಕವರ್ ಸ್ಫೋಟಗೊಳ್ಳುತ್ತಿದ್ದಂತೆ ಸುಮಾರು 10 ಅಡಿ ಎತ್ತರದವರೆಗೂ ಬೆಂಕಿ ಹೊರಚಿಮ್ಮಿದೆ. ಈ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಇನ್ಸ್‌ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಸಂಗ್ರಹ ಚಿತ್ರ
ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲುತೂರಾಟ; ಪೆಟ್ರೋಲ್ ಬಾಂಬ್ ಎಸೆತ!

ಬೆಂಕಿ ಹೊರಚಿಮ್ಮಿದ 200 ಮೀಟರ್ ದೂರದಲ್ಲೇ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಿಂತಿತ್ತು. ಇದನ್ನು ಪರಿಗಣಿಸದೇ ವಿದ್ಯಾರ್ಥಿಗಳು ಪೆಟ್ರೋಲ್ ಬಾಂಬ್ ಸ್ಫೋಟಿಸಿದ್ದಾರೆ. ಇದಲ್ಲದೆ, ಪಕ್ಕದಲ್ಲಿ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿ. ಸಂಸ್ಥೆ ಕೂಡ ಇದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ.

ಒಂದು ವೇಳೆ ಸ್ಫೋಟದಿಂದ ಹೊರಚಿಮ್ಮಿದ ಬೆಂಕಿ ಪೆಟ್ರೋಲ್ ತುಂಬಿದ ವಾಹನಕ್ಕೆ ತಗುಲಿದ್ದರೆ ದೊಡ್ಡ ದುರಂತ ಸಂಭವಿಸುತ್ತಿತ್ತು. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com