ಇಂದು ರಾಜ್ಯ ಸಚಿವ ಸಂಪುಟ ಸಭೆ: ಚಳಿಗಾಲ ಅಧಿವೇಶನ ದಿನಾಂಕ ನಿಗದಿ?

ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದ ವೇಳಾಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದ ವೇಳಾಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಗಣಿಗಾರಿಕೆ ವಲಯದಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರಗಳನ್ನು ಬೇರುಸಹಿತ ಕಿತ್ತೊಗೆಯಲು ಲೋಕಾಯುಕ್ತದ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವ ಕುರಿತು ಸಂಪುಟ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ಸಂಗ್ರಹ ಚಿತ್ರ
ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ಚಳಿಗಾಲ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಸಂಪುಟವು ಡಿಸೆಂಬರ್ 9-20 ಅಥವಾ ಡಿಸೆಂಬರ್ 16-28 ರಂದು ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆಗಳಿವೆ.

ಕೋವಿಡ್ ಉಪಕರಣಗಳ ಭ್ರಷ್ಟಾಚಾರ ಹಗರಣ ಕುರಿತು ಮೈಕೆಲ್ ಡಿ ಕುನ್ಹಾ ಆಯೋಗದ ವರದಿ, ಹವಾಮಾನ ಪ್ರೇರಿತ ನಷ್ಟದಿಂದ ರೈತರನ್ನು ರಕ್ಷಿಸಲುಹವಾಮಾನ ಪ್ರೇರಿತ ನಷ್ಟದಿಂದ ರೈತರನ್ನು ರಕ್ಷಿಸಲು ಬೆಳೆ ವಿಮಾ ಯೋಜನೆ, ಆರೋಗ್ಯ ಮೂಲಸೌಕರ್ಯವನ್ನು ನವೀಕರಿಸಲು 140 ಕೋಟಿ ರೂಪಾಯಿ ಹೂಡಿಕೆಗೆ ಒಪ್ಪಿಗೆ. ಏಳು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಕ್ರಿಟಿಕಲ್ ಕೇರ್ ಘಟಕಗಳನ್ನು ಅಳವಡಿಸುವುವುದು ಹಾಗೂ ರಾಮನಗರದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆಗೆ 160 ಕೋಟಿ ರೂ. ನೀಡುವ ಕುರಿತು ಸಚಿವ ಸಂಪುಟ ಚರ್ಚೆ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com