ಬೆಂಗಳೂರು: ಪಟ್ಟಣ ಮತ್ತು ನಗರಗಳಲ್ಲಿನ ನೀರಿನ ಬಿಲ್‌ಗಳ ಮೇಲೆ ಗ್ರೀನ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ವರದಿಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ಮತ್ತು ಬಿಜೆಪಿ ಈ "ಬೋಗಸ್ ಸುದ್ದಿ"ಯನ್ನು ಹರಡಿದೆ ಎಂದು ಕಿಡಿಕಾರಿದ್ದಾರೆ.
"ನೀರಿನ ಬಿಲ್‌ಗಳ ಮೇಲಿನ ಹಸಿರು ಸೆಸ್ ವಿಧಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ. ಇದೆಲ್ಲವೂ ಬಿಜೆಪಿ ಸೃಷ್ಟಿಸಿದ ಸುಳ್ಳು ಸುದ್ದಿ" ಎಂದು ಡಿಸಿಎಂ ಹೇಳಿದ್ದಾರೆ.
ಪರಿಸರ-ಸೂಕ್ಷ್ಮ ಪಶ್ಚಿಮ ಘಟ್ಟಗಳನ್ನು ಉಳಿಸುವ ಸಲುವಾಗಿ, ಕರ್ನಾಟಕದ ಅರಣ್ಯ ಇಲಾಖೆಯು ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕಾರ್ಪಸ್ ನಿಧಿಯನ್ನು ಸಂಗ್ರಹಿಸಲು "2 ಅಥವಾ 3 ರೂ ." ಹಸಿರು ಸೆಸ್ ವಿಧಿಸುವ ಪ್ರಸ್ತಾಪ ಮಾಡಿದೆ ಎಂಬ ವರದಿಗಳಿಗೆ ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.
ಪಶ್ಚಿಮ ಘಟ್ಟಗಳು ಕೇವಲ ಜೈವಿಕ ವೈವಿಧ್ಯತೆಯ ತಾಣವಾಗಿರದೆ ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಮತ್ತು ಇತರ ನದಿಗಳ ಮೂಲವಾಗಿವೆ. ಈ ನದಿಗಳು ರಾಜ್ಯದ ಅನೇಕ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ನೀರನ್ನು ಪೂರೈಸುತ್ತವೆ.
ಈ ಮಧ್ಯೆ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಒಡ್ಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾನು ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ನಂತರ ನಿಮಗೆ ಪ್ರತಿಕ್ರಿಯಿಸುತ್ತೇನೆ ಎಂದರು.
Advertisement