ಬೆಂಗಳೂರು: ರಾಜ್ಯ ಕೇಡರ್ ನ ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ.
ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿಯಾಗಿ ಸಿ. ಶಿಖಾ ನೇಮಕವಾಗಿದ್ದು, ಶೀಘ್ರವೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
2004ರ ಐಎಎಸ್ ಅಧಿಕಾರಿಯಾಗಿರುವ ಶಿಖಾ ಅವರು ಮೈಸೂರು ಜಿಲ್ಲಾಧಿಕಾರಿ, ಸೆಸ್ಕಾಂ ಎಂಡಿ, ಬೆಸ್ಕಾಂ ಎಂಡಿ, ಪಿಯು ಬೋರ್ಡ್ ನಿರ್ದೇಶಕಿ, ಬಿಎಂಟಿಸಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಪತಿ ಅಜಯ್ ನಾಗಭೂಷಣ್ ಕೂಡ ಐಎಎಸ್ ಅಧಿಕಾರಿಯಾಗಿದ್ದಾರೆ.
Advertisement