ಮರಕುಂಬಿ ದಲಿತರ ದೌರ್ಜನ್ಯ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಅಪರಾಧಿಗಳಿಗೆ ಧಾರವಾಡ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆ ಮರಕುಂಬಿಯಲ್ಲಿ 10 ವರ್ಷಗಳ ಹಿಂದೆ ಗ್ರಾಮದ ದಲಿತರ ಮೇಲೆ ನಡೆದಿದ್ದ ದೌರ್ಜನ್ಯ ಕೇಸ್‌ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
Representational image
ಸಾಂದರ್ಭಿಕ ಚಿತ್ರ
Updated on

ಧಾರವಾಡ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ದಶಕದ ಹಿಂದೆ ನಡೆದಿದ್ದ ಜಾತಿ ಸಂಘರ್ಷ, ಹಲ್ಲೆ, ಹಿಂಸಾಚಾರ ಪ್ರಕರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ಶಿಕ್ಷೆ ವಿಧಿಸಿದ್ದ 101 ಅಪರಾಧಿಗಳಲ್ಲಿ 99 ಮಂದಿಗೆ ಹೈಕೋರ್ಟ್‌ ಧಾರವಾಡ ಪೀಠ ಜಾಮೀನು ನೀಡಿದೆ.

ಕೊಪ್ಪಳ ಜಿಲ್ಲೆ ಮರಕುಂಬಿಯಲ್ಲಿ 10 ವರ್ಷಗಳ ಹಿಂದೆ ಗ್ರಾಮದ ದಲಿತರ ಮೇಲೆ ನಡೆದಿದ್ದ ದೌರ್ಜನ್ಯ ಕೇಸ್‌ನಲ್ಲಿ ಕಳೆದ ತಿಂಗಳು ಕೊಪ್ಪಳ ಜಿಲ್ಲಾ ನ್ಯಾಯಾಲಯವು 97 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.ಆ ಬಳಿಕ ಅವರೆಲ್ಲಾ ಹೈಕೋರ್ಟ್‌ ಮೊರೆ ಹೋಗಿದ್ದರು.

ಮೇಲ್ಮನವಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠವು 98 ಅಪರಾಧಿಗಳ ಪೈಕಿ 97 ಜನರಿಗೆ ಜಾಮೀನು ಮುಂಜೂರು ಮಾಡಿದೆ. ಜಾಮೀನು ಅರ್ಜಿ ಹಾಕದ ಎ1 ಮಂಜುನಾಥ ಹೊರತು ಪಡಿಸಿ ಉಳಿದೆಲ್ಲರಿಗೂ ಜಾಮೀನು ಮುಂಜೂರು ಮಾಡಿದೆ. ಮತ್ತೊಬ್ಬ ಅಪರಾಧಿ ರಾಮಣ್ಣ ಭೋವಿ ಶಿಕ್ಷೆಯ ಆದೇಶ ಪ್ರಕಟವಾದ ನಂತರ ಮೃತಪಟ್ಟಿದ್ದರು. ಜಾಮೀನಿನ ಮೇಲೆ ಅಪರಾಧಿಗಳು ಹೊರ ಬರಲು ಪ್ರತಿಯೊಬ್ಬರಿಗೂ 50 ಸಾವಿರ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ಪಡೆಯುವುದು ಕಡ್ಡಾಯವಾಗಿದೆ.

ದಶಕದ (2014ರ ಆಗಸ್ಟ್‌ 28) ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷ, ಹಲ್ಲೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 101 ಜನ ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5,000 ದಂಡ, ಮೂವರಿಗೆ ಐದು ವರ್ಷ ಜೈಲು ಹಾಗೂ ತಲಾ 2,000 ದಂಡ ವಿಧಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ಕೋರ್ಟ್‌ ಆದೇಶ ನೀಡಿತ್ತು. ಮೂವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದರಿಂದ ಜಾತಿನಿಂದನೆ ಕಾಯ್ದೆ ಅನ್ವಯವಾಗಿರಲಿಲ್ಲ.

Representational image
ಕೊಪ್ಪಳ: ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ; 98 ಜನರಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com