ರಾಜ್ಯದ ಜನತೆಗೆ ಬಿಗ್ ಶಾಕ್: ನದಿ ನೀರು ಬಳಕೆಗೆ 'ಗ್ರೀನ್ ಸೆಸ್' ವಿಧಿಸಲು ರಾಜ್ಯ ಸರ್ಕಾರ ಮುಂದು?

ಕುಡಿಯುವ ನೀರಿಗೂ ಸೆಸ್​ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ನಗರವಾಸಿಗಳ ಜೇಬಿಗೆ ಕತ್ತರಿ ಹಾಕೋ ಮುನ್ಸೂಚನೆ ನೀಡಿದೆ.
ಸಿಎಂ ಸಿದ್ದರಾಮಯ್ಯ-ಈಶ್ವರ್ ಖಂಡ್ರೆ
ಸಿಎಂ ಸಿದ್ದರಾಮಯ್ಯ-ಈಶ್ವರ್ ಖಂಡ್ರೆ
Updated on

ಬೆಂಗಳೂರು: ದಿನಬಳಕೆ ವಸ್ತುಗಳ ಬೆಲೆ ಏರಿಕೆಗಳಿಂದ ಈಗಾಗಲೇ ಕಂಗಾಲಾಗಿರುವ ರಾಜ್ಯದ ಜನರಿಗೆ ಮತ್ತೊಂದು ಸೆಸ್​ ಸಂಕಷ್ಟ ಶುರುವಾಗುವುದು ಬಹುತೇಕ ಖಚಿತವಾಗಿದೆ.

ಕುಡಿಯುವ ನೀರಿಗೂ ಸೆಸ್​ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ನಗರವಾಸಿಗಳ ಜೇಬಿಗೆ ಕತ್ತರಿ ಹಾಕೋ ಮುನ್ಸೂಚನೆ ನೀಡಿದೆ.

ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದ್ದು, ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ 7 ದಿನಗಳೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಈ ಪ್ರಸ್ತಾಪವನೆಯನ್ನು ಸಚಿವರು ಸರ್ಕಾರದ ಅನುಮೋದನೆಗೆ ಕಳುಹಿಸಲಿದ್ದು, ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದೇ ಆದರೆ, ಜನತೆಗೆ ಮತ್ತೊಂದು ಸಂಕಷ್ಟ ಶುರುವಾಗಲಿದೆ.

ಜೀವವೈವಿಧ್ಯ ತಾಣವಾದ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದೆ. ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ನೀರು ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯವನ್ನು ಈ ನದಿಗಳೇ ಪೂರೈಸಬೇಕಾಗುತ್ತದೆ. ಹಾಗಾಗಿ, ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಲು ಹಸಿರುವ ಸೆಸ್‌ ವಿಧಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ-ಈಶ್ವರ್ ಖಂಡ್ರೆ
BBMP: ಪ್ರತಿ ಕೆಜಿ ತ್ಯಾಜ್ಯಕ್ಕೆ 12 ರೂ ಸೆಸ್ ವಿಧಿಸಲು ಚಿಂತನೆ!

ಮುಂಗಾರು ಮಳೆಯ ಮಾರುತಗಳನ್ನು ತಡೆದು ವ್ಯಾಪಕ ಮಳೆ ಸುರಿಸುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಪಶ್ಚಿಮಘಟ್ಟದ ನದಿಗಳಿಂದ ನಗರ, ಪಟ್ಟಣಗಳಿಗೆ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್‌ನಲ್ಲಿ ಕೆಲವು ರೂಪಾಯಿ ಹಸಿರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪಿಸಬೇಕು. ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿಗಾಗಿ, ವೃಕ್ಷ ಸಂವರ್ಧನೆಗೆ ಬಳಸಬಹುದು.

ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಇಚ್ಛಿಸುವ ಕೃಷಿ ಭೂಮಿಯ ಖರೀದಿಗಾಗಿ, ಅರಣ್ಯ ಸಂರಕ್ಷಿಸಲು ಮತ್ತು ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೂ ಈ ಹಣ ಬಳಸಬಹುದು ಎಂದು ಎಂದು ಹೇಳಿದ್ದಾರೆ.

ಈ ಹಣವನ್ನು ಇತರೆ ಉದ್ದೇಶಗಳಿಗೆ ಬಳಸಲಾಗುವುದಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸಚಿವರ ಕಚೇರಿಯ ಮೂಲಗಳು ಮಾಹಿತಿ ನೀಡಿವೆ.

ನೀರಿನ ಮೂಲಗಳು ಕಡಿಮೆಯಾಗುತ್ತಿರುವುದು, ನದಿಗಳು ಬತ್ತಿ ಹೋಗುತ್ತಿರುವುದು ಮತ್ತು ಜಲಮೂಲಗಳಲ್ಲಿನ ಪೋಷಕಾಂಶಗಳ ಅಂಶವನ್ನು ಕಡಿಮೆಯಾಗುತ್ತಿರುವ ಬಗ್ಗೆ ಸಚಿವರು ಕಳವಳ ವ್ಯಕ್ತಪಡಿಸಿದ್ದು, ಈ ಬಗ್ಗೆ ನಡೆಸಿದ್ದಾರೆಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜನರು ನೀರಿನ ಸಂಸ್ಕರಣೆ ಮತ್ತು ಸಾಗಣೆಗೆ ಹಣ ಪಾವತಿ ಮಾಡುತ್ತಾರೆ. ನೀರಿನ ಮೂಲದ ಬಗ್ಗೆ ಯಾರೂ ಯೋಚಿಸುವುದಿಲ್ಲ. ಈ ಸೆಸ್ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ನೀರಿನ ಮಹತ್ವವನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ. ಸೆಸ್ ಹಣವು ಇದಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com