ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ: ನಿರ್ಮಲಾ ಸೀತಾರಾಮನ್

ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ಎಸ್‌ಕೆಡಿಆರ್‌ಡಿಪಿ) ಅಡಿಯಲ್ಲಿ ಸ್ವ-ಸಹಾಯ ಗುಂಪು(ಎಸ್‌ಎಚ್‌ಜಿ) ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ಅನ್ನು ವಿತರಣೆ ಮಾಡಲಾಯಿತು.
ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ಅನ್ನು ವಿತರಣೆ ಮಾಡಲಾಯಿತು.
Updated on

ಧರ್ಮಸ್ಥಳ: ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಕೂಡ ಇದೇ ಆಗಿದೆ. ಹೆಣ್ಮಕ್ಕಳು ನಾಯಕತ್ವ ವಹಿಸಿದರೆ ಏನಾಗುತ್ತೆ ಅನ್ನುವುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಉದಾಹರಣೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.

ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ಎಸ್‌ಕೆಡಿಆರ್‌ಡಿಪಿ) ಅಡಿಯಲ್ಲಿ ಸ್ವ-ಸಹಾಯ ಗುಂಪು(ಎಸ್‌ಎಚ್‌ಜಿ) ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ಈ ಸಂಸ್ಥೆ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿದೆ ಎಂದರು.

"ಇಂದು, ಕಲ್ಯಾಣ ಕಾರ್ಯಕ್ರಮಗಳು ನಡೆಯುತ್ತಿವೆ. ಈ ರೀತಿಯ ಕಾರ್ಯಕ್ರಮಗಳಿಂದ ಮಹಿಳೆಯರು ಸ್ವಯಂ ಗೌರವದಿಂದ ದುಡಿಯುತ್ತಿದ್ದಾರೆ. ನೀವು ಕೊಡುವ ಹಣ ಲಾಭದ ರೂಪದಲ್ಲಿ ಗೌರವಪೂರ್ವಕವಾಗಿ ನಿಮಗೆ ವಾಪಸ್ ಬಂದಿದೆ. ಗ್ರಾಮೀಣ ಅಭಿವೃದ್ಧಿಗೆ ಜನರ ಹಣ ಬಳಕೆಯಾಗುತ್ತಿದೆ. ಕೋವಿಡ್ ಸಮಯದಲ್ಲಿ ಆತ್ಮನಿರ್ಭರ್ ಭಾರತ್ ಘೋಷಣೆ ಮಾಡಿದ ಬಳಿಕ 5 ಮಿನಿ ಬಜೆಟ್ ಗಳನ್ನು ರಾಷ್ಟ್ರಕ್ಕೆ ಅರ್ಪಿಸಿದ್ದೇವೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ ಎಂದರು.

ಹೆಣ್ಮಕ್ಕಳು ನಾಯಕತ್ವ ವಹಿಸಿದರೆ ಏನಾಗುತ್ತೆ ಅನ್ನುವುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಉದಾಹರಣೆಯಾಗಿದೆ. ಧರ್ಮಸ್ಥಳ ಇದು ಗ್ರಾಮೀಣ ಯೋಜನೆಯ ಪ್ರಯೋಗಾಲಯ ಎಂದರೆ ತಪ್ಪಾಗಲಾರದು ಎಂದು ನಿರ್ಮಲಾ ಸೀತಾರಾಮನ್ ಅವರು ಸಂಘವನ್ನು ಶ್ಲಾಘಿಸಿದರು.

ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ಅನ್ನು ವಿತರಣೆ ಮಾಡಲಾಯಿತು.
Watch | ರಾಗಿ ತನ್ನಿರಿ, ಭಿಕ್ಷಕೆ ರಾಗಿ ತನ್ನಿರಿ... ಕೀರ್ತನೆ ಹಾಡಿದ ನಿರ್ಮಲಾ ಸೀತಾರಾಮನ್

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ನಡೆಯುತ್ತಿದೆ. ಇಂದು ದೇಶದಲ್ಲಿ ಕೃಷಿ ಕ್ಷೇತ್ರದ ಕ್ರಾಂತಿಯಾಗಿದೆ. ದೇಶದ ಜನರಿಗೆ ಸಾಕಾಗುವಷ್ಟು ಅಕ್ಕಿ, ಧವಸ ಧಾನ್ಯ ಉತ್ಪಾದನೆಯಾಗುತ್ತಿದೆ. ರೈತರು ಸಶಕ್ತರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಅವರು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ದೇಶದ ಆರ್ಥಿಕ ಮಂತ್ರಿಯಾದರೆ ನಾವು ನಮ್ಮ ಸಂಘದ ಮಹಿಳೆಯರನ್ನು ಆರ್ಥಿಕ ಮಂತ್ರಿಯನ್ನಾಗಿ ಮಾಡಿದ್ದೇವೆ. ಯೋಜನೆಯಲ್ಲಿ ಶೇ 62ರಷ್ಟು ಮಹಿಳೆಯರು ಇದ್ದರೆ ಶೇ. 38 ಮಂದಿ ಪುರುಷರು ಇದ್ದಾರೆ ಎಂದರು.

ಮಹಿಳೆಯರನ್ನು ಮಾತ್ರವಲ್ಲದೆ ಪುರುಷರನ್ನು ನಂಬಿ ಸಾಲ ಕೊಟ್ಟವರು ನಾವು. ಎಲ್ಲ ಸಂಘಗಳು ಶಿಸ್ತುಬದ್ಧವಾಗಿ ಕೆಲಸ ಮಾಡಿದರೆ ಏನು ಪ್ರಯೋಜನವಾಗುತ್ತದೆ ಅನ್ನುವುದಕ್ಕೆ ಈ ಲಾಭಾಂಶ ವಿತರಣೆ ಕಾರ್ಯಕ್ರಮವೇ ಸಾಕ್ಷಿ. ಬ್ಯಾಂಕ್ ನಿಮ್ಮನ್ನು ನಂಬಿ ನಮಗೆ ಸಾಲ ಕೊಟ್ಟಿದೆ. ನಾವು ನಿಮ್ಮನ್ನು ನಂಬಿ ಸಾಲ ಕೊಟ್ಟಿದ್ದೇವೆ. ಹೆಣ್ಮಕ್ಕಳ ಕೈಗೆ ಹಣ ಕೊಟ್ಟಲ್ಲಿ ಹಣದ ಸರಿಯಾದ ಬಳಕೆಯಾಗುತ್ತದೆ. ನೀವು ಗೃಹಲಕ್ಷ್ಮಿಯಾಗಿದ್ದೀರಿ. ನಿಮ್ಮಿಂದ ಸಂಸ್ಥೆಗೆ ಕೀರ್ತಿ ಬಂದಿದೆ ಎಂದರು.

ಬಳಿಕ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ಅನ್ನು ವಿತರಣೆ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com