ನಾನೂ ಈ ರಾಜ್ಯದ CM ಆಗಬೇಕು; ನಮಗೂ ಫ್ರೀ ಬಸ್ ಕೊಡಿ ಎಂದ ವಿದ್ಯಾರ್ಥಿಗಳು: ಮಕ್ಕಳ ಬೇಡಿಕೆಗೆ ಡಿಸಿಎಂ ಹೇಳಿದ್ದೇನು..?

ಮಕ್ಕಳಲ್ಲಿ ಜ್ಞಾನ ಹೆಚ್ಚಾಗಬೇಕೆಂಬ ಉದ್ದೇಶದಿಂದಲೇ ಕಾರ್ಯಕ್ರಮಗಳಲ್ಲಿ ನಿರೂಪಣೆ ಹಾಗೂ ಮಾತನಾಡಲು ಅವಕಾಶ ನೀಡಲಾಗುತ್ತಿದೆ. ನೀವೆಲ್ಲರೂ ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳ ಜೊತೆ ನೇರವಾಗಿ ಹಾಗೂ ಧೈರ್ಯವಾಗಿ ಮಾತನಾಡುತ್ತಿದ್ದೀರಾ.
DK Shivakumar
ಡಿಸಿಎಂ ಡಿ.ಕೆ ಶಿವಕುಮಾರ್online desk
Updated on

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಂಚಶೀಲನಗರದ ಪಾಲಿಕೆ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ವಿದ್ಯಾಸಾಗರ್, ನಾನು ಈ ರಾಜ್ಯದ ಸಿಎಂ ಆಗಬೇಕು, ಇದಕ್ಕಾಗಿ ಏನು ಓದಬೇಕು ಎಂದು ಕೇಳಿದ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಟ್ಟ ಸಲಹೆಯುಕ್ತ ಉತ್ತರವಿದು. “ಮಕ್ಕಳಲ್ಲಿ ಜ್ಞಾನ ಹೆಚ್ಚಾಗಬೇಕೆಂಬ ಉದ್ದೇಶದಿಂದಲೇ ಕಾರ್ಯಕ್ರಮಗಳಲ್ಲಿ ನಿರೂಪಣೆ ಹಾಗೂ ಮಾತನಾಡಲು ಅವಕಾಶ ನೀಡಲಾಗುತ್ತಿದೆ. ನೀವೆಲ್ಲರೂ ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳ ಜೊತೆ ನೇರವಾಗಿ ಹಾಗೂ ಧೈರ್ಯವಾಗಿ ಮಾತನಾಡುತ್ತಿದ್ದೀರಾ, ವಿಧಾನಸೌಧನ ಸಮ್ಮೇಳನ ಸಭಾಂಗಣವು ರಾಜ್ಯದ 7-8 ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಿದ ಜಾಗ, ಶಾಸಕಾಂಗ ಸಭೆ ನಡೆಸುವಂತಹ ಜಾಗ, ನೀವೇ ಇಲ್ಲಿ ಕೂತು, ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳು ಆಗಬೇಕು ಎಂದು ಸಲಹೆ ನೀಡಿದರು.

ನೀಲಸಂದ್ರದ ಪಾಲಿಕೆ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ಚರಣ್, ನೀವು 5 ಗ್ಯಾರಂಟಿ ನೀಡಿದ್ದೀರಿ, ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ನಮ್ಮ ಅಮ್ಮ ಅಕ್ಕ ತಂಗಿಯರನ್ನು ಮಾತ್ರ ಊರಿಗೆ ಕರೆದುಕೊಂಡು ಹೋಗುತ್ತಾರೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ ಎಂದು ಕೇಳಿದಾಗ, “ನಿಮ್ಮ ತಾಯಿಗೆ 2000, ಬಸ್ ಉಚಿತ, 10 ಕೆಜಿ ಅಕ್ಕಿ, ಉಚಿತ ವಿದ್ಯುತ್ ನೀಡಲಾಗುತ್ತಿದೆ. ನೀನು ಕೇಳಿರುವ ಪ್ರಶ್ನೆಗೆ ಸರ್ಕಾರದಲ್ಲಿ ಚರ್ಚಿಸಿ ಒಂದು ವಯೋಮಿತಿಯವರೆಗೆ ಯೋಚಿಸಿ ಮುಂದೆ ಕ್ರಮವಹಿಸಲಾಗುವುದು” ಎಂದು ಭರವಸೆ ನೀಡಿದರು. ಹೇರೋಹಳ್ಳಿ ಪಾಲಿಕೆ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ ಶಾಲಿನಿ ಬಿ.ಆರ್, ಗ್ರಾಮೀಣ ಭಾಗದಲ್ಲಿ ಪ್ರೌಢಶಾಲೆಗಳ ಕೊರತೆ ಇದೆ ಎಂದು ಕೇಳಿದಾಗ, “ಸರ್ಕಾರದಿಂದ ಹೊಸ ಯೋಜನೆ ಜಾರಿ ಮಾಡಲಾಗುತ್ತಿದ್ದು, 3 ಎಕರೆ ಪ್ರದೇಶದಲ್ಲಿ 2000 ಕಡೆ ಶಾಲೆ ನಿರ್ಮಾಣ ಮಾಡಲು ಮುಂದಾಗುತ್ತಿದೆ. ಅದನ್ನು ಖಾಸಗಿ ಶಾಲೆಗಳು ದತ್ತು ಪಡೆದುಕೊಳ್ಳಬೇಕು. ನಗರದಲ್ಲಿ ಬಂದು ವಿದ್ಯಾಭಾಸ ಪಡೆಯುವುದನ್ನು ತಪ್ಪಿಸಿ ಗ್ರಾಮೀಣ ಪ್ರದೇಶದಲ್ಲಿಯೇ ಶಾಲೆ ಪ್ರಾರಂಭಿಸಲು ಕ್ರಮವಹಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

DK Shivakumar
ಸರ್ಕಾರದಿಂದ ನೀರಿನ ಮೇಲೆ ಗ್ರೀನ್ ಸೆಸ್ ವರದಿ ತಳ್ಳಿಹಾಕಿದ ಡಿಸಿಎಂ ಡಿಕೆ ಶಿವಕುಮಾರ್

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com