ಬೆಂಗಳೂರು: ಹಸಿರು ಆಂದೋಲನವನ್ನು ಮುನ್ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಭಾರತದಲ್ಲಿ ಹಸಿರು (ಎಂಆರ್‌ಟಿಎಸ್) ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್, ನಿರ್ದೇಶಕ (ಯೋಜನೆ ಮತ್ತು ಪರಿಯೋಜನೆ) ಡಿ.ಆರ್.ಕೆ. ರೆಡ್ಡಿ, ಹಿರಿಯ ಅಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ಪ್ರಶಸ್ತಿಯು ಭಾರತೀಯ ಹಸಿರು ಕಟ್ಟಡ ಮಂಡಳಿ ನೀಡಿದ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ.
ನಮ್ಮ ಮೆಟ್ರೊ ವಿನ್ಯಾಸ, ನಿರ್ಮಾಣ, ಕಾರ್ಯಾಚರಣೆ, ನಿರ್ವಹಣೆ ಕ್ಷೇತ್ರಗಳಲ್ಲಿ ಹಸಿರು ಉತ್ತೇಜಿಸುವ ಮತ್ತು ಅನುಷ್ಠಾನಗೊಳಿಸುವ ಪ್ರಯತ್ನಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.
Advertisement