Chikkodi: ಉದ್ಘಾಟನೆಗೊಂಡ ಮೂರು ತಿಂಗಳಿಗೇ 6.5 ಕೋಟಿ ರೂ ವೆಚ್ಚದ ಸೇತುವೆ ಕುಸಿತ!

ರಾಯಬಾಗ, ಚಿಂಚಲಿ, ಕುಡಚಿ, ದಿಗ್ಗೇವಾಡಿ ಮುಂತಾದ ಹಲವಾರು ಗಡಿ ಗ್ರಾಮಗಳಿಗೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ ಸೇತುವೆ ನಿರ್ಮಾಣ ಮಾಡಲಾಯಿತು, ಆದರೆ ಈಗ ಸಂಪೂರ್ಣ ನಿರುಪಯುಕ್ತವಾಗಿದೆ.
The damaged Manjari-Bavana-soundatti bridge-cum-barrage
ಕುಸಿದ ಮಾಂಜರಿ-ಬವನಸೌಂದತ್ತಿ ಸೇತುವೆ
Updated on

ಅಥಣಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ 6.50 ಕೋಟಿ ರೂಪಾಯಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಇತ್ತೀಚೆಗೆ ನಿರ್ಮಿಸಲಾದ ಮಾಂಜರಿ-ಬವನಸೌಂದತ್ತಿ ಸೇತುವೆ-ಕಮ್-ಬ್ಯಾರೇಜ್ ಉದ್ಘಾಟನೆಗೊಂಡ ಮೂರು ತಿಂಗಳ ನಂತರ ಕುಸಿದಿದ್ದು ಸ್ಥಳೀಯರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಪ್ರಬಲವಾದ ನದಿ ಪ್ರವಾಹ ತಡೆಯದ ಸೇತುವೆಗ ಕುಸಿದಿದೆ ಎಂದು ಆರೋಪಿಸಿದ್ದಾರೆ. ರಾಯಬಾಗ, ಚಿಂಚಲಿ, ಕುಡಚಿ, ದಿಗ್ಗೇವಾಡಿ ಮುಂತಾದ ಹಲವಾರು ಗಡಿ ಗ್ರಾಮಗಳಿಗೆ ಸಂಪರ್ಕ ಸುಧಾರಿಸುವ ಉದ್ದೇಶದಿಂದ ಸೇತುವೆ ನಿರ್ಮಾಣ ಮಾಡಲಾಯಿತು, ಆದರೆ ಈಗ ಸಂಪೂರ್ಣ ನಿರುಪಯುಕ್ತವಾಗಿದೆ.

ಆರಂಭದಲ್ಲಿ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆಗೆ ಸ್ವಾಗತ ಕೋರಿದ್ದ ರೈತರು, ಈಗ 6.50 ಕೋಟಿ ಹಣ ನೀರು ಪಾಲಾಗಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬ್ಯಾರೇಜ್ ಆಗಿಯೂ ಸೇತುವೆ ಕಾರ್ಯ ನಿರ್ವಹಿಸುತ್ತಿತ್ತು. ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮತ್ತು ಮೀರಜ್, ಇಂಗಳಿ ಮತ್ತು ಯಡೂರು ಮುಂತಾದ ಸ್ಥಳಗಳ ನಡುವಿನ ಪ್ರಯಾಣವನ್ನು ಸುಗಮಗೊಳಿಸುವ ಮೂಲಕ ರೈತರಿಗೆ ಮತ್ತು ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತಿತ್ತು. ಆದರೆ ಸೇತುವೆ ಕುಸಿತದಿಂದ, ಸ್ಥಳೀಯರು ತಮ್ಮ ದೈನಂದಿನ ಪ್ರಯಾಣದಲ್ಲಿ ದೊಡ್ಡ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ.

The damaged Manjari-Bavana-soundatti bridge-cum-barrage
ಕುತ್ತಿಗೆ ವರೆಗಿನ ನೀರಿನಲ್ಲೇ ಗ್ರಾಮಸ್ಥರಿಂದ ಶವ ಸಾಗಾಟ: ಸೇತುವೆ ನಿರ್ಮಾಣಕ್ಕೆ 20 ಲಕ್ಷ ರೂ ಕೊಟ್ಟ ಜಿಲ್ಲಾಧಿಕಾರಿ!

ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ ಸಂಪರ್ಕವನ್ನು ಮರುಸ್ಥಾಪಿಸಲು ತಕ್ಷಣ ದುರಸ್ತಿ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥ್ ಗಾಯೋಗೋಳ್ ಒತ್ತಾಯಿಸಿದ್ದಾರೆ. ಕಳಪೆ ಕಾಮಗಾರಿಗೆ ಕಾರಣರಾದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ. ಅಥಣಿಯ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಿ ಎಸ್ ಲಮಾಣಿ ಮಾತನಾಡಿ, ಸಂತ್ರಸ್ತ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಶೀಘ್ರವೇ ದುರಸ್ತಿ ಕಾರ್ಯ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com