ಚಿಕ್ಕಬಳ್ಳಾಪುರ: ತಿಮ್ಮಸಂದ್ರದಲ್ಲಿ ಜಮೀನು ವಿಚಾರವಾಗಿ ಜಟಾಪಟಿ; ಪರಿಸ್ಥಿತಿ ಉದ್ವಿಗ್ನ

ದಲಿತ ಕುಟುಂಬದ ಸದಸ್ಯರು ತುಂಡು ಜಮೀನು ತಮಗೆ ಸೇರಿದ್ದು, ಹಲವು ವರ್ಷಗಳಿಂದ ತಮ್ಮ ಸ್ವಾಧೀನದಲ್ಲಿದೆ ಎಂದು ಪ್ರತಿಪಾದಿಸಿದರೆ, ಇದು ಮಸೀದಿಯ ಒಡೆತನದಲ್ಲಿದೆ ಎಂದು ಮಸೀದಿಯ ಪ್ರತಿನಿಧಿಗಳು ವಾದಿಸಿದರು.
Police pacify the two groups at Thimmasandra village
ತಿಮ್ಮಸಂದ್ರ ಗ್ರಾಮದಲ್ಲಿ ಜಮೀನು ವಿಚಾರವಾಗಿ ಪರಿಸ್ಥಿತಿ ಉದ್ವಿಗ್ನ
Updated on

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಗುರುವಾರ ದಲಿತ ಕುಟುಂಬ ಹಾಗೂ ಸ್ಥಳೀಯ ಜಾಮಿಯಾ ಮಸೀದಿ ಸದಸ್ಯರ ನಡುವೆ ಜಮೀನಿನ ವಿಚಾರವಾಗಿ ವಾಗ್ವಾದ ನಡೆದಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ದಲಿತ ಕುಟುಂಬದ ಸದಸ್ಯರು ತುಂಡು ಜಮೀನು ತಮಗೆ ಸೇರಿದ್ದು, ಹಲವು ವರ್ಷಗಳಿಂದ ತಮ್ಮ ಸ್ವಾಧೀನದಲ್ಲಿದೆ ಎಂದು ಪ್ರತಿಪಾದಿಸಿದರೆ, ಇದು ಮಸೀದಿಯ ಒಡೆತನದಲ್ಲಿದೆ ಎಂದು ಮಸೀದಿಯ ಪ್ರತಿನಿಧಿಗಳು ವಾದಿಸಿದರು. ಪೊಲೀಸರು ಗ್ರಾಮಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನೆ ಗುರುವಾರ ನಡೆದಿದ್ದರೂ ಶುಕ್ರವಾರ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಜಮೀನಿನ ವಿವಾದವು 2016 ರಿಂದ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಕ್ಫ್ ಸಮಸ್ಯೆ ರೈತರ ಆತಂಕಕ್ಕೆ ಕಾರಣವಾಗಿದೆ. ರೈತರ ಭೂಮಿಯನ್ನು ಕಬಳಿಸಲು ಕಾಂಗ್ರೆಸ್ ಸರಕಾರ ಕಂದಾಯ ಅಧಿಕಾರಿಗಳಿಗೆ ವಕ್ಫ್ ಆಸ್ತಿ ಎಂದು ನಮೂದಿಸಿರುವಂತೆ ಸೂಚನೆ ನೀಡಿದೆ ಎಂದು ಆರೋಪಿಸಿದರು.

ಕಂದಾಯ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದನ್ನು ಮುಂದುವರಿಸಿದರೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಪೊಲೀಸ್ ಮೂಲಗಳ ಪ್ರಕಾರ, ಮಸೀದಿಯ ಪ್ರತಿನಿಧಿಗಳ ದೂರಿನ ಮೇರೆಗೆ ಕೆಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಿಲ್ಲ.

Police pacify the two groups at Thimmasandra village
ವಕ್ಫ್ ವಿವಾದ: ನೈಜ ವರದಿ ಸಂಗ್ರಹಿಸಲು ಬಿಜೆಪಿ ಮೂರು ತಂಡ ರಚನೆ!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com