ಉಡುಪಿ: ಕಾಪು ತಾಲೂಕಿನ ಬೆಳಪು ಸೈನಿಕ ಕಾಲೋನಿಯಲ್ಲಿ ನ.13ರಂದು ನಡೆದಿದ್ದ ಹಿಟೋ ಅಂಡ್ ರನ್ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಆಟೋ ಚಾಲಕರೊಬ್ಬರು ಮೃತಪಟ್ಟಿದ್ದರು.
ಬೆಳಪುವಿನ ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಬಂಧಿತ ಆರೋಪಿ. ಅವರು ಚಲಾಯಿಸುತ್ತಿದ್ದ ಕಾರು ಮೊಹಮ್ಮದ್ ಹುಸೇನ್ ಎಂಬವರ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಆದರೆ ಅವರು ಕಾರು ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದರು. ಅಪಘಾತದಲ್ಲಿ ಹುಸೇನ್ (39) ಮೃತಪಟ್ಟಿದ್ದರು.
ತೀವ್ರವಾಗಿ ಗಾಯಗೊಂಡ ಹುಸೇನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಗಂಭೀರ ಗಾಯಗಳಿಂದಾಗಿ ಅವರು ಅಲ್ಲಿಯೇ ಸಾವನ್ನಪ್ಪಿದ್ದರು. ತನಿಖೆ ನಡೆಸಿದಾಗ ಎಸ್ ಯುವಿ ಪ್ರಜ್ವಲ್ ಶೆಟ್ಟಿ ಅವರದ್ದು ಎಂದು ತಿಳಿದುಬಂದಿತ್ತು.
ನಂತರ ಹಿಟ್ ಅಂಡ್ ರನ್ ಪ್ರಕರಣದ ಆರೋಪದ ಮೇಲೆ ಪ್ರಜ್ವಲ್ ಶೆಟ್ಟಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ.
Advertisement