BBMP: 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12,692 ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಬಿಬಿಎಂಪಿ ಕಚೇರಿ
ಬಿಬಿಎಂಪಿ ಕಚೇರಿ
Updated on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12,692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿದ ಪಟ್ಟಿಯನ್ನು ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ಅವರು ಶನಿವಾರ ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12,692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಅದರಂತೆ, ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12,692 ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಬಿಬಿಎಂಪಿ ಕಚೇರಿ
ಬೆಂಗಳೂರು: ಸಿಗರೇಟ್ ತುಂಡುಗಳ ಎಸೆಯಲು ಪ್ರತ್ಯೇಕ ಡಬ್ಬ ಒದಗಿಸಲು ಬಿಬಿಎಂಪಿ ಚಿಂತನೆ!

ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯಾ ವಲಯ ಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ಪಾಲಿಕೆಯ ವೆಬ್‌ಸೈಟ್ ನಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗಿರುವವರು ಯಾವುದೇ ಆಸೆ/ ಆಮಿಷಗಳಿಗೆ ಒಳಗಾಗಬಾರದು ಹಾಗೂ ಮಧ್ಯವರ್ತಿಗಳ ಮಾತುಗಳನ್ನು ಕೇಳಿ ವಂಚನೆಗಳಿಗೆ ಒಳಗಾಗಬಾರದು. ಸದರಿ ಅಂತಿಮ ಆಯ್ಕೆ ಪಟ್ಟಿಯ ವಿವರಣೆ ಅಥವಾ ಮಾಹಿತಿಗಾಗಿ ತಮ್ಮ ವ್ಯಾಪ್ತಿಗೆ ಒಳಪಡುವ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಆಯ್ಕೆಯಾಗಿರುವ ಪೌರಕಾರ್ಮಿಕರು ತಮ್ಮ ಆಯ್ಕೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ವಲಯ ಮಟ್ಟದಲ್ಲಿ ರಚಿಸಲಾಗಿರುವ ದಾಖಲಾತಿ ಪರಿಶೀಲನಾ ತಂಡಗಳ ಮುಂದೆ ದಿನಾಂಕ: 25.11.2024 ರಿಂದ 30.11.2024ರ ವರೆಗೆ ವಲಯ ಮಟ್ಟದಲ್ಲಿ ನೀಡಲಾಗುವ ವೇಳಾಪಟ್ಟಿಯ ಅನುಗುಣವಾಗಿ ಮೇಲ್ಕಂಡಂತೆ ದಾಖಲೆಗಳನ್ನು ಖುದ್ದು ಹಾಜರುಪಡಿಸಬೇಕು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com