BPL ಕಾರ್ಡು ರದ್ದು, ಯಾರು ಅನರ್ಹರು?: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಹೀಗಿದೆ...

ಅನರ್ಹರ ಕಾರ್ಡ್‌ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆಯ ಪರಿಶೀಲನೆ ಹಂತದಲ್ಲಿದೆ. ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.
CM Siddaramaiah speaks at Bagalkote
ಸಿಎಂ ಸಿದ್ದರಾಮಯ್ಯ ಬಾಗಲಕೋಟೆಯಲ್ಲಿ ಮಾತನಾಡಿದರು
Updated on

ಬಾಗಲಕೋಟೆ: ರಾಜ್ಯದಲ್ಲಿ ಬಿಪಿಎಲ್ ಕಾರ್ಡು ರದ್ದುಪಡಿಸುತ್ತಿರುವ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಲಾಗುತ್ತದೆ. ಅರ್ಹರಿಗೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಇಂದು ಭಾನುವಾರ ಬಾಗಲಕೋಟೆಯಲ್ಲಿ ಬಿಪಿಎಲ್ ಕಾರ್ಡ್ ಗಳ ರದ್ದತಿ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್‌ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆಯ ಪರಿಶೀಲನೆ ಹಂತದಲ್ಲಿದೆ. ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ, ಅರ್ಹರಿಗೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದರು.

ಹಾಗಾದರೆ ಅರ್ಹರು ಯಾರು?

ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡುಗಳಿದ್ದರೆ ಅವು ರದ್ದಾಗುತ್ತವೆ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು.

ಬಿಪಿಎಲ್‌ ರೇಷನ್‌ ಕಾರ್ಡ್‌ ಯಾರೆಲ್ಲಾ ಅನರ್ಹರು?

ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.

ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು.

ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.

ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.

ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಎಂದು ಸಿಎಂ ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com