ಅನುದಾನ ಕಡಿತ: ಡಿ.ಕೆ ಶಿವಕುಮಾರ್ ವಿರುದ್ಧ ಸಿಡಿದೆದ್ದ ಜಯನಗರ ನಾಗರೀಕರು; ಪ್ರತಿಭಟನೆಗೆ ಮುಂದು

ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ 70 ವಿವಿಧ ಸಂಘಟನೆಗಳು, ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.
ಡಿಕೆ.ಶಿವಕುಮಾರ್.
ಡಿಕೆ.ಶಿವಕುಮಾರ್.
Updated on

ಬೆಂಗಳೂರು: ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಿದ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ವಿರುದ್ಧ ಜಯನಗರ ನಿವಾಸಿಗಳು ಸಿಡಿದೆದ್ದಿದ್ದು, “ನನ್ನ ತೆರಿಗೆ ನನ್ನ ಹಕ್ಕು” ಎಂಬ ಘೋಷಣೆಯಡಿ ಹೋರಾಟಕ್ಕೆ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ 70 ವಿವಿಧ ಸಂಘಟನೆಗಳು, ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿದ ಜಯನಗರ ಶಾಸಕ ರಾಮಮೂರ್ತಿ ಅವರು, ಬೆಂಗಳೂರಿನ 27 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯ ಸರ್ಕಾರ ತಲಾ 10 ಕೋಟಿ ರೂ.ಯಂತೆ ಒಟ್ಟು 270 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಆದರೆ, ಡಿಸಿಎಂ ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ಜಯನಗರ ಕ್ಷೇತ್ರವನ್ನು ಕೈಬಿಟ್ಟಿದ್ದಾರೆಂದು ಆರೋಪಿಸಿದ್ದಾರೆ.

ಡಿಕೆ.ಶಿವಕುಮಾರ್.
ಜಯನಗರ ಹೊರತು ಪಡಿಸಿ ಬೆಂಗಳೂರು ರಸ್ತೆಗಳ ಅಭಿವೃದ್ಧಿಗೆ 10 ಕೋಟಿ ರೂ ಮಂಜೂರು: ವಿವಾದ ಹುಟ್ಟು ಹಾಕಿದ DCM ಆದೇಶ!

ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು ಎಂದು ಹೇಳಿದ್ದಾರೆ. ನಾನು ನನ್ನ ಕ್ಷೇತ್ರದ ಜನರು, ಗುರು ಹಿರಿಯರ ಮುಂದೆ ತಗ್ಗಿ ಬಗ್ಗಿ ನಡೆಯುತ್ತೇನೆ. ಜಯನಗರ ಜನರು ತೆರಿಗೆ ಪಾವತಿಸುತ್ತಿದ್ದಾರೆ. ಈ ಕಾರಣಕ್ಕೆ ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಬೃಹತ್‌ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು.

ವಿಧಾನಸಭೆಯಲ್ಲಿ ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಶಾಸಕ ಸಿ.ಕೆ.ರಾಮಮೂರ್ತಿ ಮಾತಾಡಿದ್ದರು ಎಂಬ ಕಾರಣಕ್ಕೆ ಜಯನಗರಕ್ಕೆ ಅನುದಾನ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com