ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಇಂದು ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರ ನಿಧನದಿಂದ ಅವರ ಅಪಾರ ಭಕ್ತ ಸಮೂಹ ಶೋಕದ ಕಡಲಲ್ಲಿ ಮುಳುಗಿದೆ. ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಸ್ವಾಮೀಜಿಗಳು, ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸ್ವಾಮೀಜಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಟೂರು ಮಠದ ಅವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಭಕ್ತರು ತಿಳಿಸಿದ್ದಾರೆ.
Advertisement