ಬೆಂಗಳೂರು: 16 ವರ್ಷದ ಯುವಕನೋರ್ವ ತನ್ನ ಅಪಾರ್ಟ್ ಮೆಂಟ್ ನ 7ನೇ ಅಂತಸ್ತಿನಿಂದ ಕೆಳಗೆ ಹಾರಿ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ಗೆದ್ದಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಪದವಿಪೂರ್ವ ಕಾಲೇಜಿನಲ್ಲಿ ಮೊದಲ ವರ್ಷದ ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ ಕೆಳಗ ಬಿದ್ದ ರಭಸಕ್ಕೆ ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ ಎಂದು ಹೇಳಲಾಗಿದೆ.
ಯುವಕನ ಈ ರೀತಿಯ ನಡೆಗೆ ಕಾರಣವೇನು ಎಂಬುದನ್ನು ತನಿಖೆ ಮಾಡುತ್ತಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement