ಬೆಂಗಳೂರು: ಆನ್‌ಲೈನ್ ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಮಡಿವಾಳ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ.
ಆರೋಪಿ ನಿಹಾಲ್ ಹುಸೇನ್ ಎಂಬಾತನ ವಿರುದ್ಧ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದು, ದೂರು ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾರ್ಚ್ ತಿಂಗಳಿನಲ್ಲಿ ಡೇಟಿಂಗ್ ಆ್ಯಪ್‌ನಲ್ಲಿ ನಿಹಾಲ್ ಹುಸೇನ್ ಪರಿಚಯವಾಗಿತ್ತು. ಕೆಲ ದಿನಗಳ ಬಳಿಕ ನಮ್ಮ ನಡುವೆ ಆಪ್ತತೆ ಬೆಳೆದಾಗ ಪಾರ್ಟಿಗೆಂದು ಹೋಟೆಲ್‌ಗೆ ಕರೆಸಿಕೊಂಡಿದ್ದ. ಬಳಿಕ ಆತ ಜ್ಯೂಸ್‌ನಲ್ಲಿ ಮದ್ಯ ಬೆರೆಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ.
ನಂತರ ಗರ್ಭಿಣಿಯಾಗಿದ್ದ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಪಾತ ಮಾಡಿಸಿದ. ಮದುವೆಯಾಗು ಎಂದು ಹೇಳಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ವರ್ಷ 2023ರಲ್ಲಿಯೂ ಇದೇ ಯುವತಿ ಮತ್ತೊಬ್ಬ ಯುವಕನ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿಯೇ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ದೂರು ದಾಖಲಿಸಿದ್ದರು. ಸದ್ಯ ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದು,
Advertisement