ಮಂಗಳೂರು: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಗಡಿಯಾರ ನಿವಾಸಿ ಸುಭೋದ್(14) ಮೃತಪಟ್ಟ ಬಾಲಕ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆಸ್ಪತ್ರೆಗೆ ವಿಟ್ಲ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ, ಕೆದಿಲ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್, ಕೆದಿಲ ಗ್ರಾ.ಪಂ. ಅಧ್ಯಕ್ಷ ಹರೀಶ್ ವಾಲ್ತಾಜೆ, ಗ್ರಾ.ಪಂ. ಸದಸ್ಯರಾದ ಉಮೇಶ್ ಮುರುವ, ಅಜೀಜ್ ಪುತ್ತೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement